ETV Bharat / bharat

ಕೇರಳದಲ್ಲಿ ಇನ್ಮುಂದೆ ಪೆಟ್ರೋಲ್, ಡೀಸೆಲ್, ಮದ್ಯ ದುಬಾರಿ - ಕೇರಳ ಬಜೆಟ್‌ ಟೀಕಿಸಿದ ಪ್ರತಿಪಕ್ಷಗಳು

ಕೇರಳ ಸಿಎಂ ಪಿಣರಾಯಿ ವಿಜಯನ್​ ನೇತೃತ್ವದ ಎಡಪಕ್ಷ ಸರ್ಕಾರವು ಅಲ್ಲಿನ ಜನರಿಗೆ ಶಾಕ್​ ನೀಡಿದೆ.

kerala-budget-liquor-fuel-to-cost-more-in-kerala-opposition-slams
ಕೇರಳದಲ್ಲಿ ಇನ್ಮುಂದೆ ಪೆಟ್ರೋಲ್, ಡೀಸೆಲ್, ಮದ್ಯದ ಬೆಲೆ ಮತ್ತಷ್ಟು ದುಬಾರಿ
author img

By

Published : Feb 3, 2023, 5:06 PM IST

ತಿರುವನಂತಪುರಂ (ಕೇರಳ): ನೆರೆ ರಾಜ್ಯ ಕೇರಳದಲ್ಲಿ ಇಂದು ಬಜೆಟ್​ ಮಂಡಿಸಲಾಗಿದೆ. ಬೊಕ್ಕಸಕ್ಕೆ ಹೆಚ್ಚುವರಿ ಆದಾಯ ಸೇರಿಸುವ ಸಲುವಾಗಿ ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಮೇಲೆ ಸಾಮಾಜಿಕ ಭದ್ರತಾ ಸೆಸ್ ವಿಧಿಸುವ ಘೋಷಣೆ ಮಾಡಲಾಗಿದೆ. ಇದರ ಪರಿಣಾಮ ಇನ್ಮುಂದೆ ಪೆಟ್ರೋಲ್, ಡೀಸೆಲ್ ಹಾಗೂ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗಲಿದೆ.

2023-24ನೇ ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಿದ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ್‌, ಸಾಮಾಜಿಕ ಭದ್ರತಾ ಸೆಸ್ ವಿಧಿಸುವ ಬಗ್ಗೆ ಪ್ರಕಟಿಸಿದ್ದಾರೆ. 500ರಿಂದ 999 ರೂ.ವರೆಗಿನ ಎಂಆರ್‌ಪಿ ದರದ ಐಎಂಎಫ್‌ಎಲ್‌ನ ಮದ್ಯದ ಪ್ರತಿ ಬಾಟಲಿಗೆ 20 ರೂಪಾಯಿ ಮತ್ತು ಒಂದು ಸಾವಿರಕ್ಕಿಂತ ಹೆಚ್ಚಿನ ಎಂಆರ್​ಪಿ ದರ ಹೊಂದಿರುವ ಪ್ರತಿ ಬಾಟಲಿಗೆ 40 ರೂಪಾಯಿ ಸೆಸ್​ ವಿಧಿಸಲು ಉದ್ದೇಶಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 400 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ತೈಲ ಬೆಲೆ ಏರಿಕೆ: ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೂ ಸಾಮಾಜಿಕ ಭದ್ರತಾ ಸೆಸ್ ವಿಧಿಸುವ ಪ್ರಸ್ತಾವವನ್ನು ಬಜೆಟ್​ನಲ್ಲಿ ವಿತ್ತ ಸಚಿವರು ಮಾಡಿದ್ದು, ಇನ್ಮುಂದೆ ಪ್ರತಿ ಲೀಟರ್‌ಗೆ ಎರಡು ರೂಪಾಯಿ ಸೆಸ್ ವಿಧಿಸಲಾಗುತ್ತಿದೆ. ಇದರಿಂದ ಸಾಮಾಜಿಕ ಭದ್ರತಾ ನಿಧಿಗೆ ಹೆಚ್ಚುವರಿ 750 ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ.

ಎಲೆಕ್ಟ್ರಿಕ್ ವಾಹನಗಳು ಅಗ್ಗ: ಮತ್ತೊಂದೆಡೆ, ವಾಯು ಮಾಲಿನ್ಯ ಕಡಿಮೆ ಮಾಡುವ ಉದ್ದೇಶ ಹಾಗೂ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದೆ. ಎಲೆಕ್ಟ್ರಿಕ್ ಮೋಟಾರ್ ಕ್ಯಾಬ್‌ಗಳು ಮತ್ತು ಎಲೆಕ್ಟ್ರಿಕ್ ಟೂರಿಸ್ಟ್ ಮೋಟಾರ್ ಕ್ಯಾಬ್‌ಗಳ ಮೇಲಿನ ಒಂದು ಬಾರಿ ತೆರಿಗೆಯನ್ನು ಖರೀದಿ ಮೌಲ್ಯದ ಶೇ.5ರಷ್ಟು ಇಳಿಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.

ಅಲ್ಲದೇ, ನಮ್ಮ ಬಜೆಟ್‌ನಲ್ಲಿ ಜನ ಕಲ್ಯಾಣ ಕಾರ್ಯಕ್ರಮಗಳಿಗೆ 100 ಕೋಟಿ ರೂಪಾಯಿ ಹಾಗೂ ಬೆಲೆ ಏರಿಕೆ ಪರಿಸ್ಥಿತಿಯನ್ನು ನಿಭಾಯಿಸಲು 2,000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಮೂಲಸೌಕರ್ಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಉಪಕ್ರಮಗಳನ್ನು ಘೋಷಿಸಲಾಗಿದೆ. ಇದೇ ವೇಳೆ ಕೇಂದ್ರದ ಹಣಕಾಸು ನೀತಿಗಳು ಹಾಗೂ ಸಾಲದ ಮಿತಿಯನ್ನು ಕಡಿತಗೊಳಿಸುವ ನಿರ್ಧಾರದಿಂದ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಆದರೂ, ಕೇರಳ ರಾಜ್ಯವು ಸಾಲದ ಸುಳಿಯಲ್ಲಿ ಸಿಲುಕಿಲ್ಲ ಎಂದು ಸಚಿವ ಬಾಲಗೋಪಾಲ್‌ ಹೇಳಿದರು.

ಪ್ರತಿಪಕ್ಷಗಳ ಟೀಕೆ: ಪೆಟ್ರೋಲ್, ಡೀಸೆಲ್ ಹಾಗೂ ಮದ್ಯದ ಮೇಲೆ ಸೆಸ್ ವಿಧಿಸಲು ಕೇರಳದ ಈ ಬಜೆಟ್​ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಟೀಕಿಸಿದ್ದು, ಎಡ ಸರ್ಕಾರವು ಜನರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಬಜೆಟ್​ ಮೂಲಕ ಇದನ್ನು ಮರೆಮಾಚುವ ಕೆಲಸ ಮಾಡುತ್ತಿದೆ. ಸೆಸ್​ ಏರಿಕೆ ಪ್ರಸ್ತಾವನೆಯು ಜನರನ್ನು ಲೂಟಿ ಮಾಡುವ ಕ್ರಮವಾಗಿದೆ. ಮದ್ಯದ ಮೇಲೆ ಸೆಸ್ ವಿಧಿಸುವ ನಿರ್ಧಾರದಿಂದ ಹೆಚ್ಚಿನ ಜನ ಡ್ರಗ್ಸ್​ಗೆ ಮೊರೆ ಹೋಗುವ ಆತಂಕ ಇದೆ. ಸೂಕ್ತವಾದ ಅಧ್ಯಯನ ಮಾಡದೆ ಈ ಬಜೆಟ್ ಮಂಡಿಸಲಾಗಿದೆ ಎಂದು ಪ್ರತಿಪಕ್ಷದ ನಾಯಕ ವಿ.ಡಿ.ಸತೀಶನ್ ವಾಗ್ದಾಳಿ ನಡೆಸಿದರು.

ಅಲ್ಲದೇ, ರಾಜ್ಯವು ಹಣದುಬ್ಬರವನ್ನು ಎದುರಿಸುತ್ತಿದೆ. ಇದರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಮಾರುಕಟ್ಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗುತ್ತದೆ. ಸರ್ಕಾರದ ಸೆಸ್​ ವಿಧಿಸುವ ಕ್ರಮದ ವಿರುದ್ಧ ನಾವು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಳಂ ಬೆಳಗ್ಗೆ ಗ್ರಾಹರಿಕೆ ಅಮುಲ್​ ಶಾಕ್​: ಗುಜರಾತ್​ ಹೊರತುಪಡಿಸಿ ಬೇರೆಲ್ಲ ರಾಜ್ಯಗಳಲ್ಲಿ ಹಾಲಿನ ಬೆಲೆ ಏರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.