ಬೆಂಗಳೂರು : ಕರ್ನಾಟಕ ಮತ್ತು ಕೇರಳ ನಡುವಿನ ಗಡಿ ರಸ್ತೆಗಳು ಮುಚ್ಚಲ್ಪಟ್ಟಿವೆ. ಈ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸ್ಪಷ್ಟನೆ ನೀಡಿದ್ದಾರೆ.
ಕೊರೊನಾ ಹಿನ್ನೆಲೆ ಎರಡೂ ರಾಜ್ಯಗಳ ನಡುವಿನ ಬಹುತೇಕ ರಸ್ತೆಗಳು ಮುಚ್ಚಲ್ಪಟ್ಟಿವೆ. ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ವರದಿ ನೆಗೆಟಿವ್ ಬಂದರೆ ಮಾತ್ರ ಕರ್ನಾಟಕದೊಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಪಿಣರಾಯಿ ಹೇಳಿದ್ದಾರೆ.
ಕರ್ನಾಟಕದ ಡಿಜಿಪಿ ಅತಿ ಅವಶ್ಯಕ ಸರಕು ಸಾಮಗ್ರಿಗಳನ್ನ ಸಾಗಿಸುವ ವಾಹನಗಳಿಗೆ ಗಡಿಯಲ್ಲಿ ಯಾವುದೇ ಅಡೆತಡೆಯಿರುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.