ETV Bharat / bharat

ರಾಜ್ಯಪಾಲರ ಭಾಷಣ: ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು..! - ಕೇರಳ ವಿಧಾನಸಭೆ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಧಾನಸಭೆಯಲ್ಲಿ ಮೊದಲ ಭಾಷಣ ಮಾಡಿದರು. ಸರ್ಕಾರವು, ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾನತೆಯನ್ನು ಎತ್ತಿ ಹಿಡಿಯಲಿದೆ. ಸಾಮಾಜಿಕ-ಆರ್ಥಿಕ ಅಸಮಾನತೆಗಳನ್ನು ನಿರ್ಮೂಲನೆ ಮಾಡಿ, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದರು.

ರಾಜ್ಯಪಾಲರ ಭಾಷಣ
ರಾಜ್ಯಪಾಲರ ಭಾಷಣ
author img

By

Published : May 29, 2021, 3:16 PM IST

ತಿರುವನಂತಪುರಂ: ಕೇರಳದಲ್ಲಿ 2 ನೇ ಅವಧಿಗೆ ಎಲ್​ಡಿಎಫ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಧಾನಸಭೆಯಲ್ಲಿ ಮೊದಲ ಭಾಷಣ ಮಾಡಿದರು. ಸರ್ಕಾರವು, ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಮಾನತೆಯನ್ನು ಎತ್ತಿ ಹಿಡಿಯಲಿದೆ. ಸಾಮಾಜಿಕ-ಆರ್ಥಿಕ ಅಸಮಾನತೆಗಳನ್ನು ನಿರ್ಮೂಲನೆ ಮಾಡಿ, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದರು.

ಆರೋಗ್ಯ ಕ್ಷೇತ್ರಕ್ಕೆ 1,000 ಕೋಟಿ ರೂ.

ಕೋವಿಡ್ ಎರಡನೇ ಅಲೆಗೆ ರಾಜ್ಯದ ಆರೋಗ್ಯ ಕ್ಷೇತ್ರ ತತ್ತರಿಸಿ ಹೋಗಿದ್ದು, ಈ ವಲಯದ ಉತ್ತೇಜನಕ್ಕಾಗಿ 1 ಸಾವಿರ ಕೋಟಿ ರೂ. ಪ್ಯಾಕೇಜ್​ ಘೋಷಿಸಿದ್ದಾರೆ. ಒಂದು ಕೋಟಿ ಲಸಿಕೆಗಳನ್ನು ಖರೀದಿಸಲು ರಾಜ್ಯವು ದೇಶೀಯ ತಯಾರಕಾ ಕಂಪನಿಗಳನ್ನು ಸಂಪರ್ಕಿಸಿದೆ. ಕೋವಿಡ್ ವಿರುದ್ಧದ ಹೋರಾಟ ಮುಂದುವರಿಸಲಾಗುವುದು. ಎಲ್ಲರಿಗೂ ವ್ಯಾಕ್ಸಿನೇಷನ್ ಉಚಿತವಾಗಿ ನೀಡಲಾಗುವುದು ಎಂದರು.

ಫ್ರೀ ಲಸಿಕೆ ವಿತರಣೆ ಹಾಗೂ ಕ್ಷಿಪ್ರಗತಿಯ ವ್ಯಾಕ್ಸಿನೇಷನ್ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.

ಫ್ರೀ ವೈ-ಫೈ

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ 2 ಸಾವಿರ ವೈಫೈ ಸಂಪರ್ಕಗಳನ್ನು ಸ್ಥಾಪಿಸಲಾಗುವುದು. ಸಾಮಾನ್ಯ ಜನರಿಗೂ ಡಿಜಿಟಲ್ ವ್ಯವಸ್ಥೆ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶ ಎಂದು ಖಾನ್ ತಿಳಿಸಿದ್ದಾರೆ.

ರೈತರ ಆದಾಯ ಹೆಚ್ಚಳಕ್ಕೆ ಕ್ರಮ

ಕೃಷಿ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಮೂಲಕ ಮುಂದಿನ 5 ವರ್ಷಗಳಲ್ಲಿ ರೈತರ ಆದಾಯವನ್ನು ಶೇಕಡಾ 50 ರಷ್ಟು ಹೆಚ್ಚಿಸಲಾಗುವುದು. ಸಣ್ಣ ಪ್ರಮಾಣದ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಕೃಷಿ ಭವನಗಳನ್ನು ‘ಸ್ಮಾರ್ಟ್’ ಕೃಷಿ ಭವನಗಳಾಗಿ ಪರಿವರ್ತಿಸಲಾಗುವುದು. ರಾಜ್ಯದ ಕೃಷಿ ವಿಶ್ವವಿದ್ಯಾಲಯ ಮತ್ತು ಇತರ ಸಂಬಂಧಿತ ಸಂಸ್ಥೆಗಳ ವಿಜ್ಞಾನಿಗಳ ಸಂಶೋಧನೆ ಮತ್ತು ಅಧ್ಯಯನಗಳನ್ನು ಬಳಸಿಕೊಳ್ಳುವ ಮೂಲಕ ಕೃಷಿ ಇಳುವರಿಯನ್ನು ಹೆಚ್ಚಿಸಲಾಗುವುದು ಎಂದು ರಾಜ್ಯಪಾಲರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.