ತಿರುವನಂತಪುರಂ: ವರದಕ್ಷಿಣೆ ವಿರುದ್ಧ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಪ್ರತಿಭಟನೆ ನಡೆಸಲಿದ್ದಾರೆ. ವರದಕ್ಷಿಣೆ ಪಿಡುಗು ರಾಜ್ಯದ ಹಲವಾರು ಮಹಿಳೆಯರ ಆತ್ಮಹತ್ಯೆಗೆ ಕಾರಣವಾಗಿದೆ. ಇದಕ್ಕೆ ಬೇಸರ ವ್ಯಕ್ತಪಡಿಸಿರುವ ಅವರು, ವರದಕ್ಷಿಣೆ ವಿರುದ್ಧ ಸ್ವಯಂಸೇವಕರಾಗಿ ಕೆಲಸ ಮಾಡುವುದಾಗಿ ಕಳೆದ ತಿಂಗಳು ಭರವಸೆ ನೀಡಿದ್ದರು.
ಸಾಮಾಜಿಕ ಸಮಸ್ಯೆಯನ್ನು ಎತ್ತಿ ಹಿಡಿಯಲು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಜನರ ಜತೆ ಸೇರುವುದಾಗಿಯೂ ಅವರು ತಿಳಿಸಿದ್ದರು. ಕಳೆದ ತಿಂಗಳು ವರದಕ್ಷಿಣೆಗೆ ಬಲಿಯಾದ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾದ ಬಳಿಕ ಆರಿಫ್ ಮೊಹಮ್ಮದ್ ಖಾನ್ ಈ ಹೇಳಿಕೆ ನೀಡಿದ್ದರು. ವರದಕ್ಷಿಣೆಯ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸುವ ಅವಶ್ಯಕತೆಯನ್ನು ರಾಜ್ಯಪಾಲರು ಒತ್ತಿ ಹೇಳಿದ್ದರು.