ಅಲಪ್ಪುಳ (ಕೇರಳ): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಧರ್ಮೀಯರ ವಿರುದ್ಧ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಬಾಲಕನನ್ನು ಹೆಗಲ ಮೇಲೆ ಹೊತ್ತು ಸಾಗಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎರಟ್ಟುಪೆಟ್ಟಾ ಮೂಲದ ಅನ್ಸಾರ್ ಎಂಬಾತನನ್ನು ಸೋಮವಾರ ರಾತ್ರಿ 10 ಗಂಟೆಯ ಸುಮಾರಿಗೆ ಅಲಪ್ಪುಳ ದಕ್ಷಿಣ ಪೊಲೀಸರು ವಶಕ್ಕೆ ಪಡೆದರು.
ಮೆರವಣಿಗೆಯಲ್ಲಿ ಬಾಲಕನಿಂದ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಸಿದ್ದಕ್ಕಾಗಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬೆಳವಣಿಗೆಯ ನಂತರ ಎರಟ್ಟುಪೆಟ್ಟಾದಲ್ಲಿ ಪಿಎಫ್‌ಐ ಕಾರ್ಯಕರ್ತರು ಪೊಲೀಸರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಪಿಎಫ್‌ಐ ರ್‍ಯಾಲಿಯಲ್ಲಿ ಬಾಲಕನಿಂದ ಪ್ರಚೋದನಾತ್ಮಕ ಘೋಷಣೆ: ಕೇರಳ ಪೊಲೀಸರಿಂದ ಎಫ್‌ಐಆರ್
ಪಿಎಫ್‌ಐ ಅಲಪ್ಪುಳ ಜಿಲ್ಲಾಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.