ಎರ್ನಾಕುಲಂ (ಕೇರಳ): ವಿದೇಶಗಳಲ್ಲಿನ ಕಾರ್ಯಕ್ರಮಗಳಿಗೆ ಹೋಗುವ ಮುಂಚೆ ಸನ್ನಿ ಲಿಯೋನ್ ಅವರು ಕೇರಳ ಹೈಕೋರ್ಟ್ನ ಅನುಮತಿ ಪಡೆಯಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ನ್ಯಾಯಾಲಯದ ಅನುಮತಿ ಪಡೆಯದೆ ಅವರು ವಿದೇಶ ಪ್ರವಾಸ ಮಾಡಬಾರದು ಎಂದು ಒತ್ತಾಯಿಸಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಅಲ್ಲದೇ ಕಾರ್ಯಕ್ರಮಕ್ಕಾಗಿ ಅವರ ವಿದೇಶಿ ಪ್ರವಾಸವನ್ನು ತಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಬಾಲಿವುಡ್ ನಟಿ ವಿರುದ್ಧ ಪೆರ್ಂಬಾವೂರ್ ನಿವಾಸಿ ಶಿಯಾಸ್ ಎಂಬುವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಠಾಣೆಯಲ್ಲಿ ಅವರ ವಿರುದ್ಧ ದೂರನ್ನು ಕೂಡ ನೀಡಿದ್ದರು.
ಓದಿ:ಸನ್ನಿ ಲಿಯೋನ್ ಬಂಧಿಸದಂತೆ ಕೇರಳ ಹೈಕೋರ್ಟ್ ಮಧ್ಯಂತರ ಆದೇಶ
ವಿದೇಶಗಳಿಗೆ ಪ್ರಯಾಣಿಸಲು ಸನ್ನಿ ನ್ಯಾಯಾಲಯದಿಂದ ಅನುಮತಿ ಪಡೆಯುವಂತೆ ಆದೇಶ ನೀಡಬೇಕೆಂದು ಶಿಯಾಸ್ ನ್ಯಾಯಾಲಯವನ್ನು ಕೇಳಿಕೊಂಡಿದ್ದರು. ನ್ಯಾಯಾಲಯವು ಈ ಮನವಿಯನ್ನು ತಿರಸ್ಕರಿಸಿದ್ದು, ಲಿಯೋನ್ ಅವರ ಮುಂಗಡ ಜಾಮೀನು ಅರ್ಜಿಯನ್ನು ಮಾರ್ಚ್ 8ಕ್ಕೆ ಮುಂದೂಡಿದೆ.
ಪೆರುಂಬವೂರ್ ಮೂಲದ ಆರ್ ಶಿಯಾಸ್ ಎಂಬುವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭರವಸೆ ನೀಡಿ ಸನ್ನಿ ಲಿಯೋನ್ 29 ಲಕ್ಷ ರೂ. ಸ್ವೀಕರಿಸಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ ಎಂದು ಆರೋಪಿಸಿದ್ದರು. ಅಲ್ಲದೇ ಈ ಸಂಬಂಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.