ETV Bharat / bharat

ಸನ್ನಿ ಲಿಯೋನ್ ಬಂಧಿಸದಂತೆ ಕೇರಳ ಹೈಕೋರ್ಟ್ ಮಧ್ಯಂತರ ಆದೇಶ

ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸನ್ನಿ ಲಿಯೋನ್ ಅವರ ಬಂಧಿಸದಂತೆ ಕೇರಳ ಹೈಕೋರ್ಟ್ ತಡೆ ನೀಡಿದೆ.

Kerala High Court
ಕೇರಳ ಹೈಕೋರ್ಟ್
author img

By

Published : Feb 10, 2021, 1:58 PM IST

Updated : Feb 10, 2021, 2:51 PM IST

ಕೊಚ್ಚಿ (ಕೇರಳ): 29 ಲಕ್ಷ ರೂ. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸನ್ನಿ ಲಿಯೋನ್ ಅವರ ಬಂಧಿಸದಂತೆ ಕೇರಳ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಅಶೋಕ್ ಮೆನನ್ ನೇತೃತ್ವದ ನ್ಯಾಯಪೀಠವು ನಟನ ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಮಧ್ಯಂತರ ಆದೇಶ ನೀಡಿದೆ. ಇದೇ ವೇಳೆ, ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಲು ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್​​ಪಿಸಿ)41 ಎ ಅಡಿ ನೋಟಿಸ್ ನೀಡಿದ ಬಳಿಕವೇ ವಿಚಾರಣೆ ನಡೆಸುವಂತೆ ಸೂಚಿಸಿದೆ.

ಪೆರುಂಬವೂರ್ ಮೂಲದ ಆರ್ ಶಿಯಾಸ್ ಎಂಬುವವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭರವಸೆ ನೀಡಿ ಸನ್ನಿ ಲಿಯೋನ್ 29 ಲಕ್ಷ ರೂ. ಸ್ವೀಕರಿಸಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ ಎಂದು ಆರೋಪಿಸಿದ್ದರು. ಅಲ್ಲದೇ ಈ ಸಂಬಂಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್​ ಜಾಮೀನಿಗಾಗಿ ಕೋರ್ಟ್​ ಮೊರೆ ಹೋಗಿದ್ದರು.

Last Updated : Feb 10, 2021, 2:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.