ETV Bharat / bharat

ಲಕ್ಷದ್ವೀಪದಲ್ಲಿ ಪ್ರಫುಲ್ ವಿರುದ್ಧ ಭುಗಿಲೆದ್ದ ಆಕ್ರೋಶ.. ಕಾರಣಗಳೇನು?

ಕಳೆದ 70 ವರ್ಷಗಳಿಂದ ಲಕ್ಷದ್ವೀಪ ಪ್ರದೇಶ ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ. ನಾವು ಆ ನಿಟ್ಟಿನಲ್ಲಿ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂಬುದು ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರ ನಿಲುವಾಗಿದೆ. ಕೇಂದ್ರದ ಇಬ್ಬರು ಹಿರಿಯ ಮುಖಂಡರು, ಪಟೇಲ್ ಜನರ ವಿಶ್ವಾಸ ಪಡೆದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಇಲ್ಲದಿದ್ದಲ್ಲಿ ಅವರ ನಿರ್ಧಾರದಿಂದ ಕೇಂದ್ರ ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೂ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ್ದಾರೆ..

ಲಕ್ಷದ್ವೀಪದಲ್ಲಿ ಪ್ರಫುಲ್ ವಿರುದ್ಧ ಭುಗಿಲೆದ್ದ ಆಕ್ರೋಶ

author img

By

Published : May 28, 2021, 3:02 PM IST

ಎರ್ನಾಕುಲಂ (ಕೇರಳ): ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್​ರ ವಿವಾದಾತ್ಮಕ ನಿರ್ಧಾರಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ವಿವರಣೆ ಕೋರಿದೆ.

ಅಲ್ಲದೆ, ಹೊಸ ನಿಯಮಗಳನ್ನು ಜಾರಿಗೊಳಿಸದಂತೆ ಲಕ್ಷದ್ವೀಪ ಆಡಳಿತಕ್ಕೆ ನಿರ್ದೇಶನ ನೀಡಬೇಕೆಂದು ಕೆಪಿಸಿಸಿ ಕಾರ್ಯದರ್ಶಿ ನೌಶಾದ್ ಅಲಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರು ಜಾರಿಗೊಳಿಸಿರುವ ನೀತಿಗೆ ತೀವ್ರ ವಿರೋಧ ವ್ಯಕ್ತವಾಗತೊಡಗಿದೆ. ಅಲ್ಲದೆ ಕಾಂಗ್ರೆಸ್, ಸಿಪಿಎಂ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ಈ ಬೆಳವಣಿಗೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿವೆ.

ವಿವಾದಕ್ಕೆ ಕಾರಣವಾದ ಅಂಶಗಳು:

ಮುಸ್ಲಿಂ ಸಮುದಾಯ ಅಧಿಕವಾಗಿರುವ ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರು ಜಾರಿಗೆ ತಂದ ನೀತಿಗಳು ವಿವಾದಕ್ಕೆ ಕಾರಣವಾಗಿವೆ.

  • ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಗೋ ಮಾಂಸ ಮಾರಾಟ ನಿಷೇಧ
  • ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧ
  • ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪಪ್ರದೇಶದಲ್ಲಿ ಗೂಂಡಾ ಕಾಯ್ದೆ ಜಾರಿ
  • ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಪಂಚಾಯತ್ ಮತದಾನ ಆಕಾಂಕ್ಷಿಗಳನ್ನು ಅನರ್ಹಗೊಳಿಸಬೇಕು
  • ಅಭಿವೃದ್ಧಿ ಯೋಜನೆಗಳಿಗಾಗಿ ಖಾಸಗಿಯವರಿಂದ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ
  • ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರ-2021 ರಚನೆ
  • ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ

ಕಳೆದ 70 ವರ್ಷಗಳಿಂದ ಲಕ್ಷದ್ವೀಪ ಪ್ರದೇಶ ಯಾವುದೇ ಅಭಿವೃದ್ಧಿಯನ್ನು ಕಂಡಿಲ್ಲ. ನಾವು ಆ ನಿಟ್ಟಿನಲ್ಲಿ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂಬುದು ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರ ನಿಲುವಾಗಿದೆ.

ಕೇಂದ್ರದ ಇಬ್ಬರು ಹಿರಿಯ ಮುಖಂಡರು, ಪಟೇಲ್ ಜನರ ವಿಶ್ವಾಸ ಪಡೆದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಇಲ್ಲದಿದ್ದಲ್ಲಿ ಅವರ ನಿರ್ಧಾರದಿಂದ ಕೇಂದ್ರ ಸರ್ಕಾರ ಹಾಗೂ ಪಕ್ಷದ ವರ್ಚಸ್ಸಿಗೂ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ್ದಾರೆ.

ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಆಡಳಿತದ ದುರುಪಯೋಗ ತಡೆಯಬೇಕು. ಅಲ್ಲದೇ ಆಡಳಿತಾಧಿಕಾರಿ ಪಟೇಲ್ ಅವರನ್ನು ವಾಪಸ್ ಕರೆಯಿಸಿಕೊಳ್ಳಬೇಕು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಸಿಪಿಐ ಒತ್ತಾಯಿಸಿದೆ.

ಕೇರಳ ಲಕ್ಷದ್ವೀಪದೊಂದಿಗೆ ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಅವಿನಾಭಾವ ಸಂಬಂಧ ಹೊಂದಿದೆ. ಆದರೆ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಸ್ತಾವನೆಗಳು ಖಂಡನೀಯ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಪಟೇಲ್ ಅವರ ನಿಲುವಿನ ವಿಚಾರದಲ್ಲಿ ರಾಷ್ಟ್ರಪತಿ ಹಾಗೂ ಪ್ರಧಾನಿ ಮಧ್ಯಪ್ರವೇಶಿಸಬೇಕೆಂದು ಎಡಪಕ್ಷ ಹಾಗೂ ಕಾಂಗ್ರೆಸ್ ಸಂಸದರು ಪತ್ರ ಬರೆದಿದ್ದಾರೆ.

ಪ್ರಫುಲ್ ಪಟೇಲ್ ಅವರು ಈ ಹಿಂದೆ ಗುಜರಾತ್ ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೃಹಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಪಕ್ಷದ ಹೈಕಮಾಂಡ್ ಜತೆ ನಿಕಟ ಸಂಪರ್ಕ ಹಾಗೂ ಪ್ರಭಾವ ಹೊಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.