ETV Bharat / bharat

ನಿಫಾ ವೈರಸ್​ ಕಾಟ... ಶಬರಿಮಲೆ ಯಾತ್ರೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ - ಕೇರಳ ಹೈಕೋರ್ಟ್​

ನಿಫಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಶಬರಿಮಲೆ ಯಾತ್ರೆಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕೇರಳ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್​ ನಿರ್ದೇಶನ ನೀಡಿದೆ.

kerala-high-court-seeks-fresh-guidelines-for-sabarimala-pilgrimage-in-view-of-nipah-virus-outbreak
ನಿಫಾ ವೈರಸ್​ ಕಾಟ... ಶಬರಿಮಲೆ ಯಾತ್ರೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ
author img

By ETV Bharat Karnataka Team

Published : Sep 16, 2023, 8:28 AM IST

ಕೊಚ್ಚಿ/ಕೋಯಿಕೋಡ್ (ಕೇರಳ): ಕೋಯಿಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗರೂಕತೆ ಕೈಗೊಳ್ಳುವಂತೆ ಕೇರಳ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್​ ಸೂಚನೆ ನೀಡಿದೆ. ಮಾಸಿಕ ಪೂಜೆ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆ ಕೈಗೊಳ್ಳುವ ಹಾಗೂ ದೇವಾಲಯ ತೆರೆಯುವಾಗ ಅಗತ್ಯಬಿದ್ದರೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ತಿರುವಾಂಕೂರು ದೇವಸ್ವಂ ಬೋರ್ಡ್ ಕಮಿಷನರ್ ಆರೋಗ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯ ಇದೇ ವೇಳೆ ಸೂಚನೆ ನೀಡಿದೆ. ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಮೇಲಿನ ದೇವಾಲಯವು ಪ್ರತಿ ಮಲಯಾಳಂ ತಿಂಗಳಲ್ಲಿ ಐದು ದಿನಗಳವರೆಗೆ ತೆರೆದಿರುತ್ತದೆ. ಏತನ್ಮಧ್ಯೆ, ಉತ್ತರ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ. ಶುಕ್ರವಾರ ಕೋಯಿಕ್ಕೋಡ್‌ನಲ್ಲಿ ನಿಪಾಹ್ ವೈರಸ್‌ನ ಹೊಸ ಪ್ರಕರಣಗಳು ದೃಢಪಟ್ಟಿರುವ ವರದಿಯಾಗಿದೆ. ಸೋಂಕಿತರ ಒಟ್ಟು ಸಂಖ್ಯೆ 6 ಕ್ಕೆ ತಲುಪಿದೆ. ರಾಜ್ಯದಲ್ಲಿ ಇದುವರೆಗೆ ಎರಡು ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳ ಹಾಗೂ ನಿಫಾ ವೈರಸ್​ ನಿಯಂತ್ರಣಕ್ಕಾಗಿ ಸತತವಾಗಿ ನಿಗಾ ಇರಿಸಿದೆ.

ಏತನ್ಮಧ್ಯೆ, ನಿಫಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ, ಕೇರಳದ ಕೋಯಿಕೋಡ್‌ನಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಮುಂದಿನ ಭಾನುವಾರ, ಸೆಪ್ಟೆಂಬರ್ 24 ರವರೆಗೆ ಒಂದು ವಾರದವರೆಗೆ ರಜೆ ಘೋಷಣೆ ಮಾಡಲಾಗಿದೆ. ವಾರವಿಡೀ ಆನ್‌ಲೈನ್ ತರಗತಿಗಳನ್ನು ನಡೆಸುವ ಮೂಲಕ ವ್ಯಾಸಂಗಕ್ಕೆ ಅಡ್ಡಿ ಆಗದಂತೆ ನೋಡಿಕೊಳ್ಳುವಂತೆ ಜಿಲ್ಲಾ ಆಡಳಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.

ಪ್ರಸ್ತುತ, ಸೋಂಕಿತರ ಸಂಪರ್ಕ ಪಟ್ಟಿಯಲ್ಲಿ 1,080 ಜನರಿದ್ದು, ಶುಕ್ರವಾರ ಇನ್ನೂ 130 ಮಂದಿಯನ್ನು ಹೊಸದಾಗಿ ಆ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಹೆಚ್ಚಿನ ಅಪಾಯದ ವಿಭಾಗದಲ್ಲಿ 175 ಜನರಿದ್ದು, 122 ಆರೋಗ್ಯ ಕಾರ್ಯಕರ್ತರು ಈ ಬಗ್ಗೆ ನಿಗಾ ಇಟ್ಟಿದ್ದಾರೆ. ಆಗಸ್ಟ್ 30 ರಂದು ಸಾವನ್ನಪ್ಪಿದ ವ್ಯಕ್ತಿಯ ಪರೀಕ್ಷೆಯ ಫಲಿತಾಂಶವು ಪಾಸಿಟಿವ್​ ಬಂದಿರುವ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಜನರ ಮೇಲೆ ಈ ಸೋಂಕು ಪ್ರಭಾವ ಬೀರಬಹುದು. ಹೀಗಾಗಿ ಅವರೆಲ್ಲರ ಮೇಲೆ ತೀವ್ರ ನಿಗಾ ಇಡಲಾಗಿದೆ. ಈವರೆಗೆ ರಾಜ್ಯದಲ್ಲಿ ಆರು ನಿಪಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಸಚಿವರು ದೃಢಪಡಿಸಿದ್ದಾರೆ.

ಆಗಸ್ಟ್ 30 ರಂದು ಸಾವನ್ನಪ್ಪಿದ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 17 ಜನರನ್ನು ಪ್ರತ್ಯೇಕಿಸಿ, ಕ್ವಾರಂಟೈನ್​ ಮಾಡಲಾಗಿದೆ. ಇನ್ನು ಸಕ್ರಿಯ ಪ್ರಕರಣಗಳಲ್ಲಿ ನಾಲ್ವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (with agency inputs)

ಇದನ್ನು ಓದಿ: ನಿಫಾ ವೈರಸ್​ ಆರ್ಭಟ ಕೇರಳದ ಕೋಯಿಕ್ಕೋಡ್​ಗೆ ಸೀಮಿತ: ಐಸಿಎಂಆರ್​ ಮಹಾನಿರ್ದೇಶಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.