ETV Bharat / bharat

ಕೇರಳ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ: ಪ್ರಧಾನಿ ಮೋದಿ ಸಂತಾಪ

ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Malappuram boat accident
ರಕ್ಷಣಾ ಕಾರ್ಯಾಚರಣೆ
author img

By

Published : May 8, 2023, 7:16 AM IST

ಮಲಪ್ಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ಮುಳುಗಿ 22 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದು ಬಂದಿದೆ.

ಪ್ರವಾಸಿ ದೋಣಿ ದಡದಿಂದ 300 ಮೀಟರ್ ದೂರದಲ್ಲಿ ಮುಳುಗಿದೆ. 11 ಜನರನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ ಹೆಚ್ಚಿನವರು ಮಲಪ್ಪುರಂ ಜಿಲ್ಲೆಯ ತಾನೂರ್ ಮತ್ತು ಪರಪ್ಪನಂಗಡಿ ಮೂಲದವರು ಎಂದು ಹೇಳಲಾಗುತ್ತಿದೆ. ದೋಣಿ ಮಗುಚಿ ಸಂಪೂರ್ಣ ಮುಳುಗಿದೆ. ಬೋಟ್​​ನಲ್ಲಿ ಯಾವುದೇ ಸುರಕ್ಷತಾ ಸೌಲಭ್ಯಗಳು ಇರಲಿಲ್ಲ ಎಂದು ವರದಿಯಾಗಿದೆ. ಬೋಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಿದೆ.

ಭಾನುವಾರ ರಜಾ ದಿನವಾದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

  • Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM @narendramodi

    — PMO India (@PMOIndia) May 7, 2023 " class="align-text-top noRightClick twitterSection" data=" ">

ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. "ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು" ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

  • The tragic loss of lives in the boat mishap at Malappuram, Kerala is extremely shocking and saddening. My heartfelt condolences to the families who lost their loved ones. I pray for well-being of the survivors.

    — President of India (@rashtrapatibhvn) May 7, 2023 " class="align-text-top noRightClick twitterSection" data=" ">

"ಮಲಪ್ಪುರಂನಲ್ಲಿ ದೋಣಿ ದುರಂತದಲ್ಲಿ ಜೀವಹಾನಿ ಸಂಭವಿಸಿದ್ದು ಅತ್ಯಂತ ಆಘಾತಕಾರಿ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಬದುಕುಳಿದವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ"-ರಾಷ್ಟ್ರಪತಿ ದ್ರೌಪದಿ ಮುರ್ಮು

ಘಟನಾ ಸ್ಥಳಕ್ಕೆ ಇಂದು ಸಿಎಂ ಪಿಣರಾಯಿ ಭೇಟಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಂತಾಪ ಸೂಚಿಸಿದ್ದಾರೆ. ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಅವರು ಸೂಚನೆ ನೀಡಿದ್ದಾರೆ. ಸಿಎಂ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು ಇಂದು ಘಟನಾ ಸ್ಥಳಕ್ಕೆ ಆಗಮಿಸಲಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ಆರಂಭಿಸಲಾಗಿದೆ. ಕೇರಳದಲ್ಲಿ ರಾಜ್ಯ ಸರ್ಕಾರ ಇಂದು ಅಧಿಕೃತ ಶೋಕಾಚರಣೆ ಘೋಷಿಸಿದೆ.

  • #UPDATE | Malappuram boat accident: So far, we have recovered 21 dead bodies. We don't know the exact number of people on the boat, so we are continuing the search to find out whether there are more victims trapped in the mud or not: Shiju KK, Regional Fire Range Officer https://t.co/sxxQJfxmDu pic.twitter.com/swmIOoQ4Bt

    — ANI (@ANI) May 7, 2023 " class="align-text-top noRightClick twitterSection" data=" ">

ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಿಎಂ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ಅವರು ಪ್ರವಾಸೋದ್ಯಮ ಸಚಿವ ಪಿ.ಎ.ಮೊಹಮ್ಮದ್ ರಿಯಾಸ್ ರಕ್ಷಣಾ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

"ಈವರೆಗೆ 22 ಮೃತದೇಹಗಳನ್ನು ಹೊರತೆಗೆದಿದ್ದೇವೆ. ದೋಣಿಯಲ್ಲಿದ್ದವರ ಸಂಖ್ಯೆ ನಿಖರವಾಗಿ ತಿಳಿದಿಲ್ಲ. ಹೀಗಾಗಿ ಶೋಧ ಮುಂದುವರಿಸಿದ್ದೇವೆ"- ಶಿಜು ಕೆ.ಕೆ-ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ.

ಇದನ್ನೂ ಓದಿ: ಕೇರಳದಲ್ಲಿ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆ : 18 ಮಂದಿ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.