ETV Bharat / bharat

ಕೇರಳ: ಅತ್ಯಾಚಾರ ಸಂತ್ರಸ್ತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ - ಕೇರಳ ಅಪರಾಧ ಸುದ್ದಿ

ಅತ್ಯಾಚಾರದಿಂದ ಬದುಕುಳಿದ 19 ವರ್ಷದ ಯುವತಿ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಕೇರಳ ಜಿಲ್ಲೆಯ ತಳಿಪರಂಬದಲ್ಲಿ ನಡೆದಿದೆ.

Rape survivor found hanging in house, Rape survivor found hanging in house at Kerala, Kerala crime news, Taliparamba news, ಮನೆಯಲ್ಲಿ ಅತ್ಯಾಚಾರ ಸಂತ್ರಸ್ತೆ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕೇರಳದ ಮನೆಯಲ್ಲಿ ಅತ್ಯಾಚಾರ ಸಂತ್ರಸ್ತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕೇರಳ ಅಪರಾಧ ಸುದ್ದಿ, ತಳಿಪರಂಬ ಸುದ್ದಿ,
ಕೇರಳ: ಅತ್ಯಾಚಾರ ಸಂತ್ರಸ್ತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ
author img

By

Published : Jan 26, 2022, 8:53 AM IST

ಕಣ್ಣೂರು (ಕೇರಳ): ಅತ್ಯಾಚಾರದಿಂದ ಬದುಕುಳಿದ 19 ವರ್ಷದ ಯುವತಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಳಿಪರಂಬದಲ್ಲಿ ನಡೆದಿದೆ. ಸಂತ್ರಸ್ತೆ ಸೋಮವಾರ ರಾತ್ರಿ ಆಕೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಕೆ ಅಪ್ರಾಪ್ತರಾಗಿದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವ್ಯಕ್ತಿಯೊಬ್ಬ ಪರಿಚಯವಾಗಿದ್ದು, ಬಳಿಕ ಆ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ: ಕೋವಿಡ್​​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡಿ: ಸಿಎಂಗೆ ಪತ್ರ ಬರೆದ ರೂಪ್ಸಾ

ಪಾಲಕ್ಕಾಡ್ ಜಿಲ್ಲೆಯ ಆರೋಪಿ ರಾಹುಲ್ ಕೃಷ್ಣನನ್ನು ಆಗ ಪೋಕ್ಸೊ ಕಾಯ್ದೆಯಡಿ ಬಂಧಿಸಿ ಜೈಲಿಗೆ ತಳ್ಳಲಾಗಿತ್ತು. ಕಳೆದ ಒಂದು ವಾರದಲ್ಲಿ ಕೇರಳದಲ್ಲಿ ಅತ್ಯಾಚಾರ ಸಂತ್ರಸ್ತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಎರಡನೇ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಕರಿಂದಲೇ ಪದೇ ಪದೆ ಅತ್ಯಾಚಾರಕ್ಕೊಳಗಾದ 18 ವರ್ಷದ ಯುವತಿಯೊಬ್ಬಳು ಜನವರಿ 20 ರಂದು ಕೋಝಿಕ್ಕೋಡ್ ಬಳಿಯ ತೆನ್ಹಿಪಾಲಂನಲ್ಲಿರುವ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರೋಪಿಗಳ ವಿರುದ್ಧ ಎರಡು ವರ್ಷಗಳ ಹಿಂದೆಯೇ ಪೋಕ್ಸೊ ಕಾಯ್ದೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.