ತಿರುವನಂತಪುರಂ(ಕೇರಳ): ಕಳೆದ ಕೆಲ ದಿನಗಳಿಂದ ಕೇರಳದಲ್ಲಿ ಕೊರೊನಾ ಹಾವಳಿ ಜೋರಾಗಿದ್ದು, ನಿತ್ಯ ಸಾವಿರಾರು ಹೊಸ ಸೋಂಕಿತ ಪ್ರಕರಣ ದೃಢಪಡುತ್ತಿವೆ.
ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 29,322 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 22,938 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ವೇಳೆಯಲ್ಲಿ 131 ಜನರು ಕೊರೊನಾಗೆ ಬಲಿಯಾಗಿದ್ದಾರೆ. 1,63,691 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪಾಸಿಟಿವಿಟಿ ದರ 17.91% ರಷ್ಟಿದೆ.
ಭಾರತದಲ್ಲಿ ಕೊರೊನಾ ಎರಡನೇ ಅಲೆ ಹತೋಟಿಗೆ ಬಂದಂತೆ ಕಾಣುತ್ತಿದ್ದರೂ ಮೂರನೇ ಅಲೆಯ ಅಪಾಯದಿಂದ ದೇಶ ಹೊರಬಂದಿಲ್ಲ. ದೇಶದಲ್ಲಿ ವರದಿಯಾಗುತ್ತಿರುವ ಕೋವಿಡ್ ಪ್ರಕರಣಗಳ ಪೈಕಿ ಕೇರಳದಲ್ಲಿ ಅತೀ ಹೆಚ್ಚು ಕೇಸ್ ದಾಖಲಾಗುತ್ತಿದೆ. ಅಲ್ಲದೇ ಕರ್ನಾಟಕ ಸರ್ಕಾರ ಕೂಡ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದು, ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ.
ಇದನ್ನೂ ಓದಿ: JEE Mains: ಪರೀಕ್ಷೆಯಲ್ಲಿ ಅಕ್ರಮ ಆರೋಪ, ಸಿಬಿಐನಿಂದ 7 ಮಂದಿ ಬಂಧನ