ETV Bharat / bharat

ಕೇರಳದಲ್ಲಿ ನಾಳೆಯಿಂದ ಕಠಿಣ ಲಾಕ್​ಡೌನ್​.. ಯಾವೆಲ್ಲ ಪ್ರದೇಶಗಳಲ್ಲಿ ನಿರ್ಬಂಧ ಜಾರಿ?

author img

By

Published : Aug 11, 2021, 8:51 PM IST

Updated : Aug 11, 2021, 9:04 PM IST

ದೇವರ ನಾಡು ಕೇರಳದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಕಾರಣ ಇದೀಗ ಮತ್ತೊಮ್ಮೆ ಲಾಕ್​ಡೌನ್​​ ನಿರ್ಧಾರದ ಮೊರೆ ಹೋಗಲು ಮುಂದಾಗಿದೆ.

COVID
COVID

ತಿರುವನಂತಪುರಂ(ಕೇರಳ): ಕಳೆದ ಕೆಲ ದಿನಗಳಿಂದ ಕೋವಿಡ್​ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದ್ದು, ಹೀಗಾಗಿ ಸರ್ಕಾರ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ನಾಳೆಯಿಂದಲೇ ಲಾಕ್​ಡೌನ್​ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಕೊರೊನಾ ಪ್ರಕರಣ ಶೇ.8ಕ್ಕಿಂತಲೂ ಅಧಿಕ ಇರುವ ಪ್ರದೇಶಗಳಲ್ಲಿ ಇದು ಅನ್ವಯವಾಗಲಿದೆ.

ಪಂಚಾಯತ್​ ಅಥವಾ ವಾರ್ಡ್​ಗಳಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆ ಶೇ. 8ಕ್ಕಿಂತಲೂ ಅಧಿಕವಾಗಿದ್ದರೆ ಅಂತಹ ಪ್ರದೇಶಗಳಲ್ಲಿ ಲಾಕ್​ಡೌನ್ ಜಾರಿಗೊಳ್ಳಲಿದೆ. ಇದರ ಜೊತೆಗೆ ಜಿಲ್ಲೆಗಳಲ್ಲಿ ಶೇ. 50ಕ್ಕಿಂತಲೂ ಅಧಿಕ ಕೊರೊನಾ ಪ್ರಕರಣ ಕಾಣಿಸಿಕೊಂಡಿದರೆ ಕಂಟೋನ್ಮೆಟ್​ ಝೋನ್ ಎಂದು ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ. ವಿದೇಶಗಳಿಗೆ ತೆರಳುವ ಹಾಗೂ ಅಲ್ಲಿಂದ ಬರುವ ಪ್ರವಾಸಿಗರಿಗೆ ಆರ್​ಟಿಪಿಸಿಆರ್ ಟೆಸ್ಟ್​​​ ಕಡ್ಡಾಯವಾಗಿದೆ.

ಇದನ್ನೂ ಓದಿರಿ: ಕೇರಳದಲ್ಲಿ ಕೊರೊನಾ ಆರ್ಭಟ: ವ್ಯಾಕ್ಸಿನ್ ಪಡೆದ 40 ಸಾವಿರ ಜನರಿಗೆ ಕೋವಿಡ್ ಸೋಂಕು!

ಕೇರಳದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಹತೋಟಿಗೆ ತರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ವಿಶೇಷ ಎಂದರೆ ಕೋವಿಡ್ ಲಸಿಕೆ ಪಡೆದುಕೊಂಡಿರುವ 40 ಸಾವಿರ ಜನರಲ್ಲಿ ಕೊರೊನಾ ಸೋಂಕು ದೃಢಗೊಂಡಿರುವುದು ಅಲ್ಲಿನ ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಹೀಗಾಗಿ ಅದರಿಂದ ಹೊರಬರಲು ಮತ್ತಷ್ಟು ಕಠಿಣ ನಿಯಮ ಜಾರಿಗೆ ತರುತ್ತಿದೆ. ಈಗಾಗಲೇ ಕರ್ನಾಟಕದಲ್ಲಿ ಕೇರಳಿಂದ ಬರುವ ಪ್ರವಾಸಿಗರ ಕೋವಿಡ್​ ವರದಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶದಲ್ಲಿ ನಿರ್ಬಂಧ ಸಡಿಲಿಕೆ

ಯೋಗಿ ಆದಿತ್ಯನಾಥ್ ಸರ್ಕಾರ ಮತ್ತಷ್ಟು ಸಡಿಲಿಕೆ ನೀಡಿದ್ದು, ಶಾಪ್​, ಮಾರ್ಕೆಟ್​​ಗಳನ್ನ ಓಪನ್ ಮಾಡಲು ಅನುಮತಿ ನೀಡಿದೆ. ಆದರೆ, ಸಾಮಾಜಿಕ ಅಂತರ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಎಂದಿದ್ದಾರೆ.

ಮಹಾರಾಷ್ಟ್ರದಲ್ಲೂ ಮಹತ್ವದ ನಿರ್ಧಾರ

ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡು ಬಂದಿರುವ ಕಾರಣ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಈ ಹಿಂದೆ ರಾತ್ರಿ 10 ಗಂಟೆವರೆಗೆ ಹೋಟೆಲ್​ ಹಾಗೂ ರೆಸ್ಟೋರೆಂಟ್​ ನಡೆಸಲು ಅನುಮತಿ ನೀಡಲಾಗಿತ್ತು.

ಆದರೆ, ಇದೀಗ ಸಂಜೆ 4 ಗಂಟೆಯವರೆಗೆ ಮಾತ್ರ ಅನುಮತಿ ನೀಡಲಾಗಿದೆ. ಒಂದು ವೇಳೆ ಮೂರನೇ ಅಲೆ ಹೆಚ್ಚಾದರೆ ಸಂಪೂರ್ಣವಾಗಿ ಲಾಕ್​ಡೌನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Last Updated : Aug 11, 2021, 9:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.