ರಾಯ್ಪುರ್ (ಚತ್ತೀಸ್ಗಢ): ಇಲ್ಲಿನ ರಾಜನಂದಗಾಂವ್ ಕ್ಷೇತ್ರದ ಶಾಸಕ ದೇವವ್ರತ ಸಿಂಗ್ (52) ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನತಾ ಕಾಂಗ್ರೆಸ್ನಿಂದ ಸ್ಪರ್ಧಿಸಿ ಜಯದಾಖಲಿಸಿದ್ದರು. ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತಾದರೂ ಅಷ್ಟರಲ್ಲಾಗಲೇ ಅವರು ಅಸುನೀಗಿದ್ದರು ಎಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಅವರು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಲ್ಲಿದ್ದು, 2018ರಲ್ಲಿ ಮಾಜಿ ಸಿಎಂ ಅಜಿತ್ ಜೋಗಿಯ ಜೆಸಿಸಿ ಪಕ್ಷ ಸೇರ್ಪಡೆಯಾಗಿದ್ದರು. ಶಾಸಕರ ಅಕಾಲಿಕ ಮರಣಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಉ.ಪ್ರದೇಶ ವಿಧಾನಸಭಾ ಚುನಾವಣೆ: ಚಿಕ್ಕಪ್ಪನ ಪಕ್ಷದೊಂದಿಗೆ ಅಖಿಲೇಶ್ ಮೈತ್ರಿ