ETV Bharat / bharat

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತೆರಳುತ್ತಿದ್ದ ಕಾರು​ ಅಪಘಾತ

ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದ ವೇಳೆ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರ ಕಾರ್ ಶನಿವಾರ ಅಪಘಾತಕ್ಕೀಡಾಗಿದೆ.

Union Minister Kiren Rijiju's car accident
ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಕಾರ್ ಅಪಘಾತ
author img

By

Published : Apr 8, 2023, 8:59 PM IST

Updated : Apr 8, 2023, 9:59 PM IST

ರಾಂಬನ್ (ಜಮ್ಮು ಮತ್ತು ಕಾಶ್ಮೀರ): ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದಾಗ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರ ಕಾರ್​ ಶನಿವಾರ ರಸ್ತೆ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸಚಿವರನ್ನು ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಸ್ಥಳಕ್ಕೆ ದೌಡಾಯಿಸಿದ ರಾಂಬನ್ ಪೊಲೀಸರು ಪರಿಶೀಲನೆ ನಡೆಸಿದರು.

ಕೇಂದ್ರ ಕಾನೂನು ಸಚಿವ ಸುರಕ್ಷಿತ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಶನಿವಾರ ಸಂಜೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಅಧಿಕೃತ ವಾಹನ ಸಣ್ಣ ಅಪಘಾತಕ್ಕೆ ಒಳಗಾಗಿದೆ. ಮೂಲಗಳ ಮಾಹಿತಿಯಂತೆ, ಸಚಿವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಕಾರಿಗೆ ಹಾನಿಯಾಗಿದೆ. ಆದರೆ, ಸಚಿವರಿಗೆ ಯಾವುದೇ ತೊಂದರೆಯಾಗಿಲ್ಲ ಹಾಗೂ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇತರರಿಗೂ ಏನು ಸಮಸ್ಯೆಯಾಗಿಲ್ಲ. ಸಚಿವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿ ಟ್ರಕ್‌ನಿಂದ ಸಚಿವರ ಎಸ್‌ಯುವಿ ಕಾರು ಅಪಘಾತವಾಗಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

  • Today while going from Jammu to Srinagar by Road Union Minister for Law and Justice Kiran Rijiju’s car met with an minor accident. No injuries happened to anyone and Honourable Minister was driven safely to destination: Ramban Police #Kashmir #kiranrijuju pic.twitter.com/u70SSMpEdh

    — Umar Ganie (@UmarGanie1) April 8, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಅರಣ್ಯದಲ್ಲಿ ಇಬ್ಬರು ನಕ್ಸಲ್​ ನಾಯಕರ ಸೆರೆ: ಟಿಫಿನ್ ಬಾಂಬ್ ಸೇರಿ ಸ್ಫೋಟಕಗಳ ಜಪ್ತಿ

ಘಟನೆ ಬಗ್ಗೆ ವಿವರ ನೀಡಿದ ರಾಂಬನ್ ಪೊಲೀಸರು: ಇಂದು ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆಯಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಅಪಘಾತಕ್ಕೆ ಒಳಗಾಗಿದೆ. ಯಾರಿಗೂ ಗಾಯಗಳಾಗಿಲ್ಲ ಮತ್ತು ಗೌರವಾನ್ವಿತ ಸಚಿವರು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ: ಬಿಹಾರ ಸಚಿವ ತೇಜ್​ ಪ್ರತಾಪ್​ ಆಪ್ತರ ಬ್ಯಾಗ್​ಗಳ ಹೊರ ಹಾಕಿದ ಹೋಟೆಲ್ ಸಿಬ್ಬಂದಿ: ಆರೋಪ

ಎಡಿಜಿ ಮುಖೇಶ್ ಸಿಂಗ್ ಹೇಳಿದ್ದೇನು?: ಸಚಿವರು ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದು, ಇದೊಂದು ಸಣ್ಣ ಅಪಘಾತ ಎಂದು ಖಚಿತಪಡಿಸಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಎಡಿಜಿ ಮುಖೇಶ್ ಸಿಂಗ್ ತಿಳಿಸಿದ್ದಾರೆ. ಹಿಂದಿನ ದಿನ, ರಿಜಿಜು ಅವರು ಜಮ್ಮು ಮತ್ತು ಕಾಶ್ಮೀರದ ಉಧಂಪುರಕ್ಕೆ ತಮ್ಮ ಪ್ರವಾಸದ ವಿಡಿಯೋಗಳನ್ನು ಟ್ವೀಟ್ ಮಾಡಿದ್ದರು. ಕಾನೂನು ಸೇವಾ ಶಿಬಿರದಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ಹೋಗುವುದಾಗಿ ತಮ್ಮ ಅನುಯಾಯಿಗಳಿಗೆ ತಿಳಿಸಿದ್ದರು.

ಇದನ್ನೂ ಓದಿ: ಮುಂಬೈಗೆ ಮೂವರು ಉಗ್ರರು ಎಂಟ್ರಿ: ಮಾಹಿತಿ ಸಿಗುತ್ತಲೇ ತನಿಖೆ ಚುರುಕುಗೊಳಿಸಿದ ಖಾಕಿ

ಜಮ್ಮು ಮತ್ತು ಕಾಶ್ಮೀರ ವಿಶ್ವವಿದ್ಯಾನಿಲಯದಲ್ಲಿ ಡೋಗ್ರಿ ಭಾಷೆಯಲ್ಲಿ ಭಾರತದ ಸಂವಿಧಾನದ ಮೊದಲ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ಹೆದ್ದಾರಿಯಲ್ಲಿ ಈ ಹಿಂದೆ ಅನೇಕ ಅಪಘಾತಗಳನ್ನು ನಡೆದಿವೆ. ಏಕೆಂದರೆ ಈ ಪ್ರದೇಶದಲ್ಲಿ ಆಗಾಗ ಸಣ್ಣ ಪ್ರಮಾಣದಲ್ಲಿ ಭೂಕುಸಿತವಾಗುತ್ತಲೇ ಇರುತ್ತದೆ.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಕೊಲೆ ಆರೋಪ.. ಪೋಷಕರಿಂದ ದೂರು ದಾಖಲು

Last Updated : Apr 8, 2023, 9:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.