ನವದೆಹಲಿ : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಪಾದ್ ನಾಯಕ್ ಅವರ ಸ್ಥಾನಕ್ಕೆ ಬೇರೆಯವರನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ.
ಆಯುಷ್ ಸಚಿವಾಲಯಕ್ಕೆ ಸಂಬಂಧಿಸಿದ ಅವರ ಖಾತೆಯನ್ನು ತಾತ್ಕಾಲಿಕವಾಗಿ ರಾಜ್ಯ ಸಚಿವರಾದ ಶ್ರೀ ಕಿರಣ್ ರಿಜಿಜು ಅವರಿಗೆ ನೀಡಲಾಗಿದೆ. ಪ್ರಧಾನಿ ಅವರ ಸಲಹೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶ್ರೀಪಾದ್ ನಾಯಕ್ ಅವರು ಆಯುಷ್ ಸಚಿವಾಲಯಕ್ಕೆ ಮರಳುವವರೆಗೆ ಈ ವ್ಯವಸ್ಥೆಯನ್ನು ಮುಂದುವರಿಸಬಹುದು ಎಂದು ಭಾರತದ ರಾಷ್ಟ್ರಪತಿಗಳು ನಿರ್ದೇಶಿಸಿದ್ದಾರೆ.