ಎರ್ನಾಕುಲಂ(ಕೇರಳ): ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪದಡಿಯಲ್ಲಿ ಕೊಚ್ಚಿ ಮೂಲದ ಟ್ಯಾಟೂ ಕಲಾವಿದ ಸುಜೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಒಂದು ವಾರದ ಹಿಂದೆ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಸುಜೀಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಟ್ಯಾಟೂ ಹಾಕಿಸಿಕೊಳ್ಳಲು ತೆರಳಿದ್ದಾಗ ಸುಜೀಶ್ ಅತ್ಯಾಚಾರ ಎಸಗಿದ್ದ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಈ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವಾಗಲೇ ಶನಿವಾರ ಆರು ಮಹಿಳೆಯರು ಸುಜೀಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಚ್ಚಿಯಲ್ಲಿ ಸ್ನೇಹಿತನೊಂದಿಗೆ ತಲೆಮರೆಸಿಕೊಂಡಿದ್ದ ಸುಜೀಶ್ನನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಂಧಿಸಿದ್ದಾರೆ.
ಸುಜೀಶ್, ಪ್ರಸಿದ್ಧ ಟ್ಯಾಟೂ ಕಲಾವಿದನಾಗಿದ್ದು ಪಾರ್ಲರ್ ನಡೆಸುತ್ತಿದ್ದಾನೆ. ಈಗ ಪೊಲೀಸರು ಎಲ್ಲಾ ದೂರುಗಳನ್ನು ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕುಟುಂಬಸ್ಥರೊಂದಿಗೆ ವೆಂಕಟೇಶ್ವರನ ದರ್ಶನ ಪಡೆದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ