ಭುವನೇಶ್ವರ (ಒಡಿಶಾ): ಸುಲಿಗೆಗಾಗಿ ಪಿಐಎಲ್ ಸಲ್ಲಿಕೆ ಆರೋಪ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಸುಭೋದ್ ಕುಮಾರ್ ಅವರಿಗೆ ಪಶ್ಚಿಮ ಬಂಗಾಳದ ಕೋಲ್ಕತ್ತಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
2016ರಿಂದ 2022ರವರೆಗೆ ರಾಂಚಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಭೋದ್ ಕುಮಾರ್ ಕೆಲ ತಿಂಗಳ ಹಿಂದೆಯಷ್ಟೇ ಒಡಿಶಾಕ್ಕೆ ವರ್ಗಾವಣೆಗೊಂಡಿದ್ದಾರೆ. ಇಲ್ಲಿನ ಇಡಿಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಶೀಘ್ರದಲ್ಲೇ ಕೋಲ್ಕತ್ತಾ ಪೊಲೀಸರು ಸುಭೋದ್ ಅವರನ್ನು ವಿಚಾರಣೆಗೂ ಒಳಪಡಿಸುವ ಸಾಧ್ಯತೆ ಇದೆ.
ಈ ಸುಲಿಗೆಗಾಗಿ ಪಿಐಎಲ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಈಗಾಗಲೇ ಜಾರ್ಖಂಡ್ ಮೂಲದ ವಕೀಲರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಬಂಧನದ ನಂತರ ಕೋಲ್ಕತ್ತಾ ಪೊಲೀಸರು ಇಡಿ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿರುವ ಬೆಳವಣಿಗೆ ನಡೆದಿದೆ ಎಂಬುದು ಗಮನಾರ್ಹ.
ಇದನ್ನೂ ಓದಿ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ