ETV Bharat / bharat

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಕೇಸ್: ಇತ್ಯರ್ಥಕ್ಕೆ 4 ತಿಂಗಳ ಗಡುವು ನೀಡಿದ ಕೋರ್ಟ್​​​​ - ಈಟಿವಿ ಭಾರತ ಕರ್ನಾಟಕ

ಶ್ರೀ ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ಮಸೀದಿ ವಿವಾದದ ವಿಚಾರಣೆ ನಡೆಸಿರುವ ಅಲಹಾಬಾದ್​ ಹೈಕೋರ್ಟ್​​​ ವಿಡಿಯೋ ಸಮೀಕ್ಷೆ ನಡೆಸಲು ಅನುಮತಿ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನಾಲ್ಕು ತಿಂಗಳ ಒಳಗೆ ಇತ್ಯರ್ಥ ಮಾಡುವಂತೆ ನಿರ್ದೇಶನ ನೀಡಿದೆ.

Krishna Janmabhoomi Shahi Idgah
Krishna Janmabhoomi Shahi Idgah
author img

By

Published : Aug 29, 2022, 9:55 PM IST

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರಕರಣ ಇದೀಗ ಮತ್ತಷ್ಟು ಮಹತ್ವದ ಘಟ್ಟಕ್ಕೆ ತಲುಪಿದೆ. ಶ್ರೀಕೃಷ್ಣ ಜನ್ಮಭೂಮಿ ಇರುವ ಸಂಪೂರ್ಣ ಪ್ರದೇಶದ ವಿಡಿಯೋ ಸಮೀಕ್ಷೆ ನಡೆಸಲು ಅನಮತಿ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ನಾಲ್ಕು ತಿಂಗಳ ಒಳಗೆ ಇತ್ಯರ್ಥ ಮಾಡುವಂತೆ ಅಲಹಾಬಾದ್​ ಹೈಕೋರ್ಟ್​​​ ಮಥುರಾದ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಹಿಂದೂ ಸಂಘಟನೆಗಳು ದಾಖಲಿಸಿರುವ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಈ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಶ್ರೀಕೃಷ್ಣನ ಆರಾಧಕರಾದ ನಮಗೆ ದೇವರ ಆಸ್ತಿಯನ್ನು ಮರುಸ್ಥಾಪಿಸುವಂತೆ ಕೋರಿ ಮೊಕದ್ದಮೆ ಹೂಡುವ ಹಕ್ಕಿದೆ. ಕೃಷ್ಣ ಜನ್ಮಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಹಲವು ವರ್ಷಗಳ ಹಿಂದೆಯೇ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ, ಆ ರಾಜಿ ಕಾನೂನುಬಾಹಿರವಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ಪ್ರಕರಣ: ಜುಲೈ 1 ರಿಂದ ವಿಚಾರಣೆ

ಇದರ ವಿಚಾರಣೆ ಕೈಗೆತ್ತಿಕೊಂಡಿರುವ ಅಲಹಾಬಾದ್​​​ ಹೈಕೋರ್ಟ್​​​ ಮುಂದಿನ ನಾಲ್ಕು ತಿಂಗಳೊಳಗೆ ಪ್ರಕರಣ ವಿಲೇವಾರಿ ಮಾಡುವಂತೆ ತಿಳಿಸಿದೆ. ನ್ಯಾಯಾಲಯ ನೇಮಿಸುವ ಸಮಿತಿಯ ನೇತೃತ್ವದಲ್ಲಿ ಮಥುರಾದ ಶ್ರೀಕೃಷ್ಣ ಜನ್ಮಭೂಮಿಗೆ ಸೇರಿದ ಸ್ಥಳದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮನೀಶ್ ಯಾದವ್​​ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕಳೆದ ಒಂದು ವರ್ಷದಿಂದ ಮಥುರಾ ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ. ಹೀಗಾಗಿ, ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಮಾಡಿದಂತೆ ಇಲ್ಲೂ ವಿಡಿಯೋ ಸಮೀಕ್ಷೆ ನಡೆಯಬೇಕು. ಮಸೀದಿ ಆವರಣದಲ್ಲಿ ಹಿಂದೂ ಕಲಾಕೃತಿಗಳು ಮತ್ತು ಪುರಾತನ ಧಾರ್ಮಿಕ ಶಾಸನಗಳು ಇವೆ ಎನ್ನಲಾಗಿದೆ. ಹೀಗಾಗಿ ವಿಡಿಯೋ ಸಮೀಕ್ಷೆ ನಡೆಸಿದರೆ ಇವೆಲ್ಲ ಕುರುಹುಗಳು ಇವೆಯೋ ಇಲ್ಲವೇ ಎಂಬ ಬಗ್ಗೆ ತಿಳಿದುಕೊಳ್ಳಲು ಸಮೀಕ್ಷೆ ನೆರವಿಗೆ ಬರಲಿದೆ ಎಂದು ಮಥುರಾ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ಪ್ರಕರಣ ಅಲಹಾಬಾದ್​ ಹೈಕೋರ್ಟ್ ಮೆಟ್ಟಿಲೇರಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.