ETV Bharat / bharat

ಕೇರಳದಲ್ಲಿ ಕಲ್ಲು ತೂರಾಟ: ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಬಸ್​ ಚಾಲನೆ, ವಿಡಿಯೋ - ಕೇರಳದಲ್ಲಿ ಪಿಎಫ್​ಐ ಕಾರ್ಯಕರ್ತರ ಕಲ್ಲು ತೂರಾಟ

ಕೇರಳದಲ್ಲಿ ಪಿಎಫ್​ಐ ಕಾರ್ಯಕರ್ತರು ಎನ್​ಐಎ ದಾಳಿ ಖಂಡಿಸಿ, ಹರತಾಳ ನಡೆಸುತ್ತಿದ್ದಾರೆ. ಅಲ್ಲದೇ ಅವರು ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಇದರಿಂದ ತಪ್ಪಿಸಿಕೊಳ್ಳಲು ಕೆಎಸ್​ಆರ್​ಟಿಸಿ ಬಸ್​ ಚಾಲಕನೊಬ್ಬ ಹೆಲ್ಮೆಟ್​ ಧರಿಸಿ ಚಾಲನೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

PFI hartal
ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಬಸ್​ ಚಾಲನೆ
author img

By

Published : Sep 23, 2022, 2:14 PM IST

Updated : Sep 23, 2022, 4:28 PM IST

ಎರ್ನಾಕುಲಂ: ಪಿಎಫ್ಐ ಕಚೇರಿಗಳ ಮೇಲೆ ಗುರುವಾರ ಎನ್​ಐಎ ನಡೆಸಿರುವ ದಾಳಿಯನ್ನು ಖಂಡಿಸಿ ಕೇರಳದಲ್ಲಿ ಕಾರ್ಯಕರ್ತರು ಹರತಾಳ (ಪ್ರತಿಭಟನೆ) ನಡೆಸುತ್ತಿದ್ದಾರೆ. ಅಲ್ಲದೇ ಬಸ್​ಗಳ ಮೇಲೆ ಪಿಎಫ್​ಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೊಬ್ಬ ಹೆಲ್ಮೆಟ್​ ಧರಿಸಿ ಬಸ್​ ಚಲಾಯಿಸುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್​ ಆಗುತ್ತಿದೆ.

ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಬಸ್​ ಚಾಲನೆ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಹರತಾಳ ಹೆಸರಿನಲ್ಲಿ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಅಲ್ಲದೇ ಅವರು ನಡೆಸಿದ ಕಲ್ಲು ತೂರಾಟದಲ್ಲಿ ಅನೇಕ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಹಾನಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಲು ಮುಂದಾದ ಚಾಲಕನಿಗೆ ಹಲವರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ತನಂತಿಟ್ಟದಲ್ಲೂ ಇಂತಹದ್ದೇ ಘಟನೆ ವರದಿಯಾಗಿದೆ.

ಎರ್ನಾಕುಲಂ ಜಿಲ್ಲೆಯ ಆಲುವಾ ಗ್ಯಾರೇಜ್, ಮರಂಪಲ್ಲಿ ಮತ್ತು ಪಕಲೋಮಟ್ಟಂನಲ್ಲಿ ವ್ಯಾಪಕ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಮಧ್ಯೆ, ಕೆಎಸ್‌ಆರ್‌ಟಿಸಿ ಸೇವೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಆಂಟನಿ ರಾಜು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: NIA ದಾಳಿ ಖಂಡಿಸಿ ಪ್ರತಿಭಟನೆ: PFI ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಉಡುಪಿ ಪೊಲೀಸರು

Last Updated : Sep 23, 2022, 4:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.