ಕುಲ್ಗಾಂ(ಜಮ್ಮು ಕಾಶ್ಮೀರ): ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಕುಲ್ಗಾಂ ಪ್ರದೇಶದಲ್ಲಿ ಹೊಡೆದುರುಳಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ರೆದ್ವಾನಿ ಬಾಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಇದಕ್ಕೂ ಮುನ್ನ ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಜ್ರಾಮ್ ಪತ್ರಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನೊಬ್ಬನನ್ನು ಹೊಡೆದುರಳಿಸಲಾಗಿತ್ತು.
ಇದನ್ನೂ ಓದಿ: ಗೌರಿಬಿದನೂರಿನ ಸೈನಿಕನೀಗ ಲೆಫ್ಟಿನೆಂಟ್ ಕರ್ನಲ್... 23 ವರ್ಷದ ಸೇವೆಗೆ ಒಲಿದು ಬಂತು ಹುದ್ದೆ