ನವದೆಹಲಿ: ಭಾರತ ಮತ್ತು ಚೀನಾ ನಡುವೆ ಎಂಟನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಈ ವಾರ ನಡೆಯಲಿದ್ದು, ಚಳಿಗಾಲ ಪ್ರಾರಂಭವಾಗುವ ಹಿನ್ನೆಲೆ ಪೂರ್ವ ಲಡಾಖ್‌ನಲ್ಲಿನ ವಿಲೇವಾರಿ ಪ್ರಕ್ರಿಯೆಯ ಕುರಿತು ಮಾತುಕತೆಗಳನ್ನು ಮುಂದುವರೆಸುವ ಉದ್ದೇಶವನ್ನು ಹೊಂದಿದೆ.
ಅಕ್ಟೋಬರ್ 12ರಂದು ನಡೆದ ಏಳನೇ ಸುತ್ತಿನ ಮಿಲಿಟರಿ ಮಾತುಕತೆಯ ಸಂದರ್ಭದಲ್ಲಿ ಪೂರ್ವ ಲಡಾಖ್‌ನ ಘರ್ಷಣೆಯ ಸ್ಥಳಗಳಿಂದ ಸೈನ್ಯವನ್ನು ಹೊರಹಾಕುವಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ "ಎಂಟನೇ ಸುತ್ತಿನ ಮಿಲಿಟರಿ ಮಾತುಕತೆ ಈ ವಾರ ನಡೆಯುವ ಸಾಧ್ಯತೆ ಇದೆ" ಎಂದು ಮೂಲವೊಂದು ತಿಳಿಸಿದೆ.
ಎತ್ತರದ ಪ್ರದೇಶಗಳಲ್ಲಿ ಚಳಿಗಾಲದ ತಿಂಗಳುಗಳಲ್ಲಿ ತಾಪಮಾನವು ಮೈನಸ್ 25 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುತ್ತದೆ.
ಲೇಹ್ ಮೂಲದ 14 ಕಾರ್ಪ್ಸ್ಗೆ ಹೊಸದಾಗಿ ನೇಮಕಗೊಂಡ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ಎಂಟನೇ ಸುತ್ತಿನ ಮಿಲಿಟರಿ ಮಾತುಕತೆಯಲ್ಲಿ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ.