ETV Bharat / bharat

ಆಶಿಶ್ ಮಿಶ್ರಾಗೆ ಜಾಮೀನು: ಸುಪ್ರೀಂಕೋರ್ಟ್​ ಮೊರೆ ಹೋದ ರೈತರ ಕುಟುಂಬಸ್ಥರು

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನೀಡಲಾಗಿದೆ. ಇದನ್ನು ಪ್ರಶ್ನಿಸಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿವೆ.

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
author img

By

Published : Feb 21, 2022, 6:22 PM IST

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮೂರು ಕುಟುಂಬ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಲಖನೌ ಪೀಠದ ಜಾಮೀನು ಆದೇಶಕ್ಕೆ ತಡೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅವರ ತಂದೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಅದೇ ಸರ್ಕಾರದಲ್ಲಿ ಸಚಿವರಾಗಿರುವ ಕಾರಣ ಆರೋಪಿ ರಾಜ್ಯ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವವನ್ನು ಹೊಂದಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ವಕೀಲ ಪ್ರಶಾಂತ್ ಭೂಷಣ್ ಮೂಲಕ ಜಗಜಿತ್ ಸಿಂಗ್, ಪವನ್ ಕಶ್ಯಪ್ ಮತ್ತು ಸುಖವಿಂದರ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಜಾಮೀನು ಅರ್ಜಿಯ ನೋಟಿಸ್​ ಅನ್ನು ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ನೀಡಬೇಕು ಎಂದು ಹೇಳಲಾಗಿದೆ. ಮಿಶ್ರಾ ಅವರು ಉನ್ನತ ಸ್ಥಾನದಲ್ಲಿರುವುದರಿಂದ ಅವರು ಸಾಕ್ಷಿಗಳು ಮತ್ತು ಸಾಕ್ಷ್ಯಗಳನ್ನು ಹಾಳುಮಾಡುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬ್ಯಾಂಕ್​ಗೆ ಬುರ್ಖಾ ಧರಿಸಿ ಬಂದಿದ್ದಕ್ಕೆ ಹಣ ನೀಡಲು ನಿರಾಕರಿಸಿದ ಸಿಬ್ಬಂದಿ : ವಿಡಿಯೋ ಮಾಡಿ ಹರಿಬಿಟ್ಟ ಯುವತಿ!

ಕಳೆದ ವರ್ಷ ನವೆಂಬರ್‌ನಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರಾಕೇಶ್ ಕುಮಾರ್ ಜೈನ್ ಅವರನ್ನು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂಕೋರ್ಟ್ ನೇಮಿಸಿತ್ತು. ಈ ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿಯನ್ನು ಸುಪ್ರೀಂಕೋರ್ಟ್ ಪುನರ್​​ ರಚಿಸಿತ್ತು. ಅಲ್ಲದೇ ಐಪಿಎಸ್ ಅಧಿಕಾರಿ ಎಸ್. ಬಿ. ಶಿರಾಡ್ಕರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿತ್ತು.

ಅಕ್ಟೋಬರ್ 3, 2021 ರಂದು, ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈತರ ಆಂದೋಲನದ ಸಂದರ್ಭದಲ್ಲಿ ಉಂಟಾದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.