ಲಖೀಂಪುರ ಖೇರಿ(ಉತ್ತರ ಪ್ರದೇಶ): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಸೇರಿದ್ದ ಕಾರು ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸಚಿವರ ಪುತ್ರ ಆಶಿಶ್ ಮಿಶ್ರಾ ಅ ವರನ್ನ ಬಂಧನ ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಿ ಇದೊಂದು ಪೂರ್ವನಿಯೋಜಿತ ಕೊಲೆ ಎಂಬ ಮಾಹಿತಿ ಹೊರಹಾಕಿದೆ.
ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ಕೇಳಿದಾಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತಾಳ್ಮೆ ಕಳೆದುಕೊಂಡಿದ್ದು, ವರದಿಗಾರನೋರ್ವರ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಸಚಿವರು ಮತ್ತೊಂದು ವಿವಾದ ತಮ್ಮ ಮೇಲೆ ಎಳೆದುಕೊಂಡಿದ್ದಾರೆ.
ಸಚಿವ ಅಜಯ್ ಮಿಶ್ರಾ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ್ದರು. ಕಾರ್ಯಕ್ರಮ ಮುಕ್ತಾಯದ ಬಳಿಕ ಲಖೀಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ವಿಚಾರವಾಗಿ ಪ್ರಶ್ನೆ ಕೇಳಿದ್ದಾರೆ. ಈ ವೇಳೆ ಕೋಪಗೊಂಡಿರುವ ಸಚಿವರು ಪತ್ರಕರ್ತನೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದು, ಆತನನ್ನು ತಳ್ಳಲು ಮುಂದಾಗಿದ್ದಾರೆ. ಜೊತೆಗೆ ಮೊಬೈಲ್ ಸ್ವೀಚ್ ಆಫ್ ಮಾಡುವಂತೆ ಸೂಚನೆ ನೀಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಇದೀಗ ವೈರಲ್ ಆಗಿವೆ.
-
#WATCH | MoS Home Ajay Kumar Mishra 'Teni' hurls abuses at a journalist who asked a question related to charges against his son Ashish in the Lakhimpur Kheri violence case. pic.twitter.com/qaBPwZRqSK
— ANI UP (@ANINewsUP) December 15, 2021 " class="align-text-top noRightClick twitterSection" data="
">#WATCH | MoS Home Ajay Kumar Mishra 'Teni' hurls abuses at a journalist who asked a question related to charges against his son Ashish in the Lakhimpur Kheri violence case. pic.twitter.com/qaBPwZRqSK
— ANI UP (@ANINewsUP) December 15, 2021#WATCH | MoS Home Ajay Kumar Mishra 'Teni' hurls abuses at a journalist who asked a question related to charges against his son Ashish in the Lakhimpur Kheri violence case. pic.twitter.com/qaBPwZRqSK
— ANI UP (@ANINewsUP) December 15, 2021
ಇದನ್ನೂ ಓದಿರಿ: ಭುವನ ಸುಂದರಿ ಪಟ್ಟ ಗೆದ್ದು ತವರಿಗೆ ಬಂದ ಮಿಸ್ ಯುನಿವರ್ಸ್ 'ಸಂಧು'... ಅದ್ಧೂರಿ ಸ್ವಾಗತ
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್ ಅವರನ್ನ ದೆಹಲಿಗೆ ಕರೆಯಿಸಿಕೊಂಡಿದ್ದು, ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಲಖೀಂಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ಐಟಿ ಇದೀಗ ವರದಿ ಬಹಿರಂಗಗೊಳಿಸಿದ್ದು, ಇದೊಂದು ಯೋಜಿತ ಪಿತೂರಿ ಎಂಬ ಮಾಹಿತಿ ಹೊರಹಾಕಿದೆ.