ನವದೆಹಲಿ : ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ(Lakhimpur Kheri violence) ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟ ಪ್ರಕರಣದ ವಿಚಾರಣೆಯನ್ನು ಯುಪಿ ಸರ್ಕಾರದ (Uttar Pradesh government) ಕೋರಿಕೆಯ ಮೇರೆಗೆ ಸುಪ್ರೀಂಕೋರ್ಟ್(Supreme Court) ನವೆಂಬರ್ 15ಕ್ಕೆ ಮುಂದೂಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲುಸ್ತುವಾರಿ ವಹಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಲು ಆದೇಶಿಸಿತ್ತು. ಬಳಿಕ ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ್ ಅವರನ್ನು ಏಕಸದಸ್ಯ ತನಿಖಾ ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಅಲ್ಲದೇ, 2 ತಿಂಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸಲು ಗಡುವು ನೀಡಿತ್ತು.
ಹೀಗಾಗಿ, ಪ್ರಕರಣದ ತನಿಖೆಯು ಪ್ರಗತಿಯಲ್ಲಿರುವುದರಿಂದ ಕೋರ್ಟ್ ವಿಚಾರಣೆಯನ್ನು ಮುಂದೂಡುವಂತೆ ಸರ್ಕಾರ ಮಾಡಿದ ಮನವಿ ಆಧಾರದ ಮೇಲೆ ಸುಪ್ರೀಂಕೋರ್ಟ್ ನ.15ಕ್ಕೆ ವಿಚಾರಣೆ ಮುಂದೂಡಿದೆ.