ಲಖನೌ(ಉತ್ತರ ಪ್ರದೇಶ): ಲಖಿಂಪುರ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಇಂದು ಉತ್ತರ ಪ್ರದೇಶ ಪೊಲೀಸರ ಮುಂದೆ ಹಾಜರಾಗಿದ್ದಾನೆ.
ಅಕ್ಟೋಬರ್ 8ರಂದು ಆಶಿಶ್ ಮಿಶ್ರಾ ಕೋರ್ಟ್ಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಪೊಲೀಸರ ಮುಂದೆ ಆಶಿಶ್ ಹಾಜರಾಗಿದ್ದಾನೆ. ಪೊಲೀಸರು ಆತನನ್ನು ಕೋರ್ಟ್ಗೆ ಕರೆದೊಯ್ಯುವ ಸಾಧ್ಯತೆಯಿದೆ.
ಹಿಂಸಾಚಾರ ಪ್ರಕರಣದಲ್ಲಿ ಅಶಿಶ್ ಮಿಶ್ರಾನನ್ನು ಬಂಧಿಸುವಂತೆ ಒತ್ತಡ ಹೆಚ್ಚಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಕ್ಷ್ಯವಿಲ್ಲದೇ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದಿದ್ದರು.
ಇದನ್ನೂ ಓದಿ: 206 ದಿನಗಳಲ್ಲೇ ಇದೇ ಮೊದಲ ಬಾರಿಗೆ ದೇಶಾದ್ಯಂತ ಕಡಿಮೆ ಕೊರೊನಾ ಪ್ರಕರಣಗಳು ಪತ್ತೆ