ಗಾಂಧಿನಗರ (ಗುಜರಾತ್): ಆರ್ಸೆಲರ್ ಮಿತ್ತಲ್ ಸಮೂಹದ ಅಧ್ಯಕ್ಷ ಲಕ್ಷ್ಮಿ ಮಿತ್ತಲ್ ಮತ್ತು ಸಿಇಒ ದಿಲೀಪ್ ಉಮಾ ಅವರು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ತಮ್ಮ ಹಜೀರಾ ಮೂಲದ ಸ್ಥಾವರ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಶುಕ್ರವಾರ ನಡೆದ ಸಭೆಯಲ್ಲಿ, ಮಿತ್ತಲ್ ಅವರು ಸೂರತ್‌ನ ಹಜೀರಾದಲ್ಲಿರುವ ಪ್ಲಾಂಟ್ ವಿಸ್ತರಣೆಗೆ ಹೆಚ್ಚುವರಿಯಾಗಿ 50,000 ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಿದ್ದೇವೆ ಎಂಬ ಮಾಹಿತಿಯನ್ನು ಸಿಎಂ ರೂಪಾನಿ ಗಮನಕ್ಕೆ ತಂದಿದ್ದಾರೆ. ಅಲ್ಲದೇ, ಮುಂದಿನ ದಿನಗಳಲ್ಲಿ ಗುಜರಾತ್ನಲ್ಲಿ ಒಟ್ಟು 1 ಲಕ್ಷ ಕೋಟಿ ಹೂಡಿಕೆ ಮಾಡಲು ಉತ್ಸುಕರಾಗಿದ್ದೇವೆ, ಇದಕ್ಕೆ ನಿಮ್ಮ ಸಹಕಾರ ಬೇಕು ಎಂದಿದ್ದಾರೆ.
ಮಿತ್ತಲ್ ಅವರ ಈ ನಿರ್ಧಾರವನ್ನು ಸ್ವಾಗತಿಸಿರುವ ಸಿಎಂ ರೂಪಾನಿ, ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.