ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ದುಮ್ಕಾ ಖಜಾನೆಯಿಂದ ಅಕ್ರಮವಾಗಿ ಹಣ ಪಡೆದಿರುವ ಪ್ರಕರಣದಲ್ಲಿ ಈಗಾಗಲೇ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ನ ಹೈಕೋರ್ಟ್ ಜಾಮೀನು ಮುಂಜೂರು ಮಾಡಿದೆ. ಇದರ ಮಧ್ಯೆ ಅವರ ಪರ ವಕೀಲರು ರಾಂಚಿ ಸಿಬಿಐ ನ್ಯಾಯಾಲಯದಲ್ಲಿ ಬಿಡುಗಡೆ ಆದೇಶ ಪ್ರತಿ ಪಡೆದುಕೊಂಡಿದ್ದಾರೆ.
ವಕೀಲ ಪ್ರಭಾತ್ ಕುಮಾರ್ 10 ಲಕ್ಷ ರೂ.ಗಳ ಜಾಮೀನು ಬಾಂಡ್ ಪಾವತಿ ಮಾಡಿದ್ದು, ಲಾಲು ಪ್ರಸಾದ್ ಯಾದವ್ ಬಿಡುಗಡೆಗೆ ಆದೇಶ ಪಡೆದುಕೊಂಡಿದ್ದಾರೆ.
ಸದ್ಯ ಲಾಲು ಪ್ರಸಾದ್ ಯಾದವ್ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ ದುಮ್ಕಾ ಖಜಾನೆ ಪ್ರಕರಣದಲ್ಲಿ ಏಪ್ರಿಲ್ 17ರಂದು ಹೈಕೋರ್ಟ್ ಜಾಮೀನು ನೀಡಿತ್ತು. ಬಿಡುಗಡೆಯ ಆದೇಶ ಪ್ರತಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ದೆಹಲಿ ತಲುಪಲಿದೆ.
ಇದನ್ನೂ ಓದಿ: ಕೋವಿಡ್ನಿಂದ ಚೇತರಿಸಿಕೊಂಡ ಮಾಜಿ ಪಿಎಂ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಮೇವು ಹಗರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಶಿಕ್ಷೆ ಆಗಿತ್ತು. ಆದರೆ ಈಗಾಗಲೇ ಮೂರು ಪ್ರಕರಣಗಳಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಇದೀಗ ನಾಲ್ಕನೇ ಪ್ರಕರಣದಲ್ಲೂ ಜಾರ್ಖಂಡ್ ಹೈಕೋರ್ಟ್ನಿಂದ ಜಾಮೀನು ಸಿಕ್ಕಿರುವ ಕಾರಣ ಇದೀಗ ಹೊರಬರಲಿದ್ದಾರೆ.