ರಾಂಚಿ: ಡುಮ್ಕಾ ಖಜಾನೆ ಪ್ರಕರಣ ಮತ್ತು ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಮುಂದೂಡಿದೆ.
ಸದ್ಯ ಜೈಲಿನಲ್ಲಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ನವೆಂಬರ್ 27 ಕ್ಕೆ ಮುಂದೂಡಿದೆ.
ಲಾಲು ಪ್ರಸಾದ್ ಯಾದವ್ ಅವರು ಸಲ್ಲಿಸಿದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ಕೋರಿತ್ತು. ಸಿಬಿಐನ ಮನವಿ ಮನ್ನಿಸಿದ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 27 ಕ್ಕೆ ಮುಂದೂಡಿದೆ