ನವದೆಹಲಿ: 'ಉದ್ಯೋಗಕ್ಕಾಗಿ ಭೂಮಿ' ಹಗರಣದ ಆರೋಪಿಗಳಾದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಅವರ ಮಗಳು ಮಿಸಾ ಭಾರತಿ ಮತ್ತು ಇತರರಿಗೆ ದೆಹಲಿ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಈಗಾಗಲೇ ಯಾವುದೇ ಬಂಧನವಿಲ್ಲದೇ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ವಿಶೇಷ ನ್ಯಾಯಾಲಯ ಗಮನಿಸಿದೆ.
ನ್ಯಾಯಾಲಯವು ಪ್ರತಿ ಆರೋಪಿಗೆ 50,000 ರೂ.ಗಳ ವೈಯಕ್ತಿಕ ಜಾಮೀನು ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಒದಗಿಸುವಂತೆ ನಿರ್ದೇಶನ ನೀಡಿದೆ. ಲಾಲು ಪ್ರಸಾದ್ ಯಾದವ್ ಇತ್ತೀಚೆಗೆ ಮೂತ್ರಪಿಂಡ ಕಸಿಗೆ ಒಳಗಾಗಿದ್ದರು. ವೀಲ್ ಚೇರ್ ನಲ್ಲಿ ಬಂಧಿಯಾಗಿದ್ದ 74 ವರ್ಷದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನ್ಯಾಯಾಲಯಕ್ಕೆ ಆಗಮಿಸಿದರು.
ಇಂದು ಬೆಳಗ್ಗೆ 11 ಗಂಟೆ ನ್ಯಾಯಾಧೀಶರ ಮುಂದೆ ಹಾಜರಾದ ಯಾದವ್ ದಂಪತಿ: ಇದಕ್ಕೂ ಮುನ್ನ ಫೆಬ್ರವರಿ 27 ರಂದು ರೂಸ್ ಅವೆನ್ಯೂ ನ್ಯಾಯಾಲಯವು ಯಾದವ್ ಸೇರಿದಂತೆ ಇತರ ಆರೋಪಿಗಳಿಗೆ ಸಮನ್ಸ್ ನೀಡಿತ್ತು. ಅವರು ಸಲ್ಲಿಸಿದ ಜಾಮೀನು ಅರ್ಜಿಗಳಿಗೆ ಸಂಬಂಧಿಸಿದಂತೆ ಮಾರ್ಚ್ 15 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಇಂದು(ಬುಧವಾರ) ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರ ಮುಂದೆ ಯಾದವ್ ದಂಪತಿ ಹಾಜರಾದರು.
ಇದನ್ನೂ ಓದಿ:ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ತನಿಖೆಯಿಂದ ತೇಜಸ್ವಿ ಸ್ಕಿಪ್, ಹೆಚ್ಚಿನ ಸಮಯ ಬೇಡಿಕೆ
ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ತನ್ನ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಗಮನಿಸಿದ ನಂತರ ನ್ಯಾಯಾಲಯವು ಅವರ ಜಾಮೀನು ಅರ್ಜಿಗಳನ್ನು ಅಂಗೀಕರಿಸಿದೆ. ಲಾಲು ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ 2004 ಮತ್ತು 2009 ರ ನಡುವೆ ರೈಲ್ವೆಯಲ್ಲಿ ನಡೆದ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿದೆ ಎಂದು ಸಿಬಿಐ ಆರೋಪಿಸಿತ್ತು.
ಉದ್ಯೋಗಕ್ಕಾಗಿ ಭೂಮಿ ಹಗರಣ ಎಂದರೇನು?: ರೈಲ್ವೆಯಲ್ಲಿನ ಗ್ರೂಪ್ ಡಿ ಅಧಿಕಾರಿಗಳ ಬದಲಿ ಹುದ್ದೆಗಳಿಗೆ ಬದಲಾಗಿ ಯಾದವ್ ಅವರು, ಅವರಿಂದ ಕಡಿಮೆ ಬೆಲೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ಆರೋಪಿಸಿದೆ. ಇದೇ ವೇಳೆ, ಅದೇ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ರೈಲ್ವೆ ಇಲಾಖೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಸಿಬಿಐ ಆರೋಪಿಸಿದೆ. ಈ ನೇಮಕಾತಿಗಳಲ್ಲಿ ಭಾರತೀಯ ರೈಲ್ವೆ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್ ಶೀಟ್‌ನಲ್ಲಿ ತಿಳಿಸಿದೆ. ಈ ಅಭ್ಯರ್ಥಿಗಳು ಯಾದವ್ ಅವರಿಗೆ ಕಡಿಮೆ ಬೆಲೆಗೆ ಭೂಮಿಯನ್ನು ಮಾರಾಟ ಮಾಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಲಾಲು ಹಾಗೂ ಸಂಬಂಧಿಕರ ಮೇಲೆ ಇಡಿ, ಸಿಬಿಐ ದಾಳಿ ಬಗ್ಗೆ ನಿತೀಶ್ ಕುಮಾರ್ ಅಸ್ಪಷ್ಟ ಹೇಳಿಕೆ