ETV Bharat / bharat

ಲಾಲುಗೆ ಇಂದೂ ಸಿಗದ ಬೇಲ್: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ - Lalu prasad Yadav bail plea hearing in Jarkhand high court

ದುಮ್ಕಾ ಖಜಾನೆ ಪ್ರಕರಣದಲ್ಲಿ ಜೈಲಿನಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿಯ ವಿಚಾರಣೆ ಜಾರ್ಖಂಡ್ ಹೈಕೋರ್ಟ್ ಮುಂದೂಡಿದೆ.

ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
author img

By

Published : Nov 27, 2020, 1:14 PM IST

ನವದೆಹಲಿ: ದುಮ್ಕಾ ಖಜಾನೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್‌ ಮುಂದೂಡಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶ ಅಪ್ರೇಶ್ ಕುಮಾರ್​, ಡಿಸೆಂಬರ್ 11ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ. ಜಾರ್ಖಂಡ್‌ನಲ್ಲಿ ಮೇವು ಹಗರಣದ ಆರೋಪದಲ್ಲಿ ಜೈಲು ಸೇರಿರುವ ಆರ್‌ಜೆಡಿ ವರಿಷ್ಠ ಲಾಲು ಮೇಲೆ ಒಟ್ಟು 5 ಪ್ರಕರಣಗಳಿವೆ. ಇವುಗಳಲ್ಲಿ ಕೊನೆಯ ಪ್ರಕರಣ ದುಮ್ಕಾ ಖಜಾನೆಯದ್ದಾಗಿದೆ.

ಇದನ್ನೂ ಓದಿ: ಹೆರಿಗೆ ನೋವು ಕಡಿಮೆ ಮಾಡಲು ಗರ್ಭಿಣಿಯ ಜತೆ ನೃತ್ಯ ಮಾಡಿದ ವೈದ್ಯೆ: ವಿಡಿಯೋ ವೈರಲ್

ಈ ಹಿಂದೆ ನವೆಂಬರ್​ 6 ರಂದು ಲಾಲು ಪ್ರಸಾದ್​ ಯಾದವ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಾರ್ಖಂಡ್​ ಹೈಕೋರ್ಟ್​, ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಮತ್ತಷ್ಟು ಕಾಲಾವಕಾಶ ಕೋರಿದ ಹಿನ್ನೆಲೆ ನವೆಂಬರ್ 27 ಕ್ಕೆ ಅರ್ಜಿ ವಿಚಾರಣೆ ಮುಂದೂಡಿತ್ತು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.