ಪ್ರಯಾಗ್ರಾಜ್(ಉತ್ತರಪ್ರದೇಶ) : ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಭೂ ವಿವಾದದ ವಿಚಾರವಾಗಿ ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿರುವ ದುಷ್ಟರು, ಮನೆಯಲ್ಲಿನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ.
ಜಮೀನು ವಿವಾದವಾಗಿ ಈ ಘಟನೆ ನಡೆದಿದೆ. ದಲಿತ ಕುಟುಂಬದ ನಾಲ್ವರ ಹತ್ಯೆ ಮಾಡಲಾಗಿದೆ. ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತರ ಕುಟುಂಬ ಭೇಟಿ ಮಾಡಲು ಅನೇಕ ರಾಜಕೀಯ ಮುಖಂಡರು ಆಗಮಿಸುತ್ತಿದ್ದಾರೆ.
ಆಘಾತಕಾರಿ ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯ ನಿವಾಸಿಗಳು ಆರೋಪ ಮಾಡಿದ್ದಾರೆ. ಮೃತರಲ್ಲಿ 50 ವರ್ಷದ ವ್ಯಕ್ತಿ,ಆತನ 47 ವರ್ಷದ ಪತ್ನಿ, 17 ವರ್ಷದ ಮಗಳು ಹಾಗೂ 10 ವರ್ಷದ ಮಗ ಸೇರಿದ್ದಾರೆ.
ಗುರುವಾರ ಬೆಳಗ್ಗೆ ಮನೆಯಲ್ಲಿ ಎಲ್ಲರೂ ಶವವಾಗಿ ಪತ್ತೆಯಾಗಿದ್ದಾರೆ. ಈಗಾಗಲೇ 11 ಜನ ಆರೋಪಿಗಳ ಪೈಕಿ 8 ಮಂದಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿರಿ: ಮಲೇಷಿಯನ್ ಓಪನ್ ಸ್ಕ್ವಾಷ್ ಚಾಂಪಿಯನ್‌ಶಿಪ್ : ಎದುರಾಳಿ ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಸೌರವ್!
ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈಗಾಗಲೇ ವರದಿ ಬಂದಿದೆ. ಅದರ ಪ್ರಕಾರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಭೂ-ವಿವಾದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ರೂ ಕೂಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪ ಸಹ ಕೇಳಿ ಬಂದಿದೆ.