ನವದೆಹಲಿ: ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಸಾವಿಗೀಡಾಗಿರುವ ಆರ್ಜೆಡಿ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದೀನ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯಲ್ಲಿ ನಡೆಯಿತು.
ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಮಾಜಿ ಸಂಸದ ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕಳೆದ ಶನಿವಾರ ಸಾವನ್ನಪ್ಪಿದ್ದರು. ಇಸ್ಲಾಮಿಕ್ ಪದ್ಧತಿ ಮತ್ತು ಆಚರಣೆಗಳ ಪ್ರಕಾರ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಈ ವೇಳೆ, ಅನೇಕರು ಭಾಗಿಯಾಗಿದ್ದರು. ಎಎಪಿ ಶಾಸಕ ಅಮಾನತುಲ್ಲಾ ಖಾನ್ ಸಹ ಅಂತ್ಯಕ್ರಿಯೆ ವೇಳೆ ಉಪಸ್ಥಿತರಿದ್ದರು.
ಬಿಹಾರದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಭದ್ರತಾ ವ್ಯವಸ್ಥೆ ಹಾಗೂ ಕೋವಿಡ್ ಪ್ರೋಟೋಕಾಲ್ನಿಂದಾಗಿ ಅದಕ್ಕೆ ಅನುಮತಿ ನೀಡಿರಲಿಲ್ಲ.