ಅಯೋಧ್ಯಾ: ಇಲ್ಲಿನ ಹೊಸ ಘಾಟ್ಗೆ ಲತಾ ಮಂಗೇಶಕರ್ ವೃತ್ತ ಎಂದು ನಾಮಕರಣ ಇಡಲಾಗಿದೆ. ಸೆಪ್ಟೆಂಬರ್ 28 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೃತ್ತದ ಉದ್ಘಾಟನೆ ಮಾಡಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಲತಾ ಮಂಗೇಶ್ಕರ್ ಅವರ ಪೂರ್ಣ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಸಮಾರಂಭದಲ್ಲಿ ಲತಾ ಮಂಗೇಶ್ಕರ್ ಅವರ ಸೋದರಳಿಯ ಆದಿತ್ಯ ಮಂಗೇಶ್ಕರ್ ಭಾಗವಹಿಸಲಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಸಚಿವರು, ರಾಜ್ಯ ಸರ್ಕಾರದ ಹಲವು ಸಚಿವರು ಹಾಗೂ ಕೆಲವು ವಿಶೇಷ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬೈ ಚಲನಚಿತ್ರ ಲೋಕದ ತಾರೆಯರು ಕೂಡ ಪಾಲ್ಗೊಳ್ಳಲಿದ್ದಾರೆ.
ಸಮಾರಂಭಕ್ಕಾಗಿ ಅಯೋಧ್ಯೆಯ ಲತಾ ಮಂಗೇಶ್ಕರ್ ವೃತ್ತದಲ್ಲಿ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಇಲ್ಲಿ ವೀಣೆ ಪ್ರತಿಷ್ಠಾಪಿಸಲಾಗಿದೆ. ಸಂಪೂರ್ಣ ಅಯೋಧ್ಯೆಯಲ್ಲಿ ಆಕರ್ಷಕವಾಗಿ ಅಲಂಕರಿಸಲಾಗಿದೆ. ಲತಾ ಮಂಗೇಶ್ಕರ್ ವೃತ್ತದ ಉದ್ಘಾಟನೆ ಸಿದ್ಧತೆಗಳನ್ನು ಹಿರಿಯ ಅಧಿಕಾರಿಗಳು ಸೋಮವಾರ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲತಾ ಮಂಗೇಶ್ಕರ್ ಚೌಕ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ವಿಶೇಷ ಅತಿಥಿಗಳೂ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಲತಾ ಮಂಗೇಶ್ಕರ್ ವೃತ್ತ ಕಾರ್ಯಕ್ರಮದ ಸಮಯದಲ್ಲಿ ಸಂಚಾರ ಸುವ್ಯವಸ್ಥಿತವಾಗಿರುವಂತೆ ಸಿದ್ಧತೆ ಮಾಡಲಾಗಿದೆ. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಎಸ್‌ಎಸ್‌ಪಿ ಪ್ರಶಾಂತ್ ವರ್ಮಾ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲತಾ ಮಂಗೇಶ್ಕರ್ ವೃತ್ತವನ್ನು ವರ್ಚುಯಲ್ ಆಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡ ಭಾಗವಹಿಸುವ ಸಾಧ್ಯತೆಯಿದೆ. ಅಯೋಧ್ಯೆಯ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು.
ಇದನ್ನೂ ಓದಿ: ಅಯೋಧ್ಯೆ ತೀರ್ಪು ಕಾನೂನಿನ ಆಧಾರದ ಮೇಲೆ ನೀಡಲಾಗಿದೆ, ಧರ್ಮದ ಮೇಲಲ್ಲ: ರಂಜನ್ ಗೊಗೊಯ್