ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಕೊರೊನಾ ಮತ್ತು ನ್ಯುಮೋನಿಯಾದಿಂದಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಕೊರೊನಾ ಪರೀಕ್ಷೆಗಾಗಿ ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾದೊಂದಿಗೆ ಅವರಿಗೆ ನ್ಯುಮೋನಿಯಾದ ಲಕ್ಷಣಗಳು ಕಾಣಿಸಿಕೊಂಡವು. ವಯೋಸಹಜ ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರನ್ನು ಇನ್ನೂ ಕೆಲವು ದಿನಗಳವರೆಗೆ ತೀವ್ರ ನಿಗಾ ಘಟಕದಲ್ಲಿ ಇರಿಸಬೇಗುತ್ತದೆ ಎಂದು ಅವರ ವೈದ್ಯ ಪ್ರತೀತ್ ಸಮಾಧಾನಿ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಪಂಜಾಬ್ ಚುನಾವಣೆ : ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆಂದ ಪಂಜಾಬ್ ಸಿಎಂ ಸಹೋದರ
ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದೆ. ಅದಾಗ್ಯೂ, ಲತಾ ಮಂಗೇಶ್ಕರ್ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವಂತೆ ಅವರು ಲತಾ ಮಂಗೇಶ್ಕರ್ ಅವರ ಅಭಿಮಾನಿಗಳಿಗೆ ಮನವಿ ಮಾಡಿದರು.
ಜನವರಿ 8 ರಂದು ಲತಾ ಮಂಗೇಶ್ಕರ್ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು. ಜನವರಿ 10 ರಂದು ಅವರ ವರದಿಯು ಪಾಸಿಟಿವ್ ಬಂದಿತು. ಕೂಡಲೇ ಅವರನ್ನು ಸಮೀಪದ ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.