ಪಣಜಿ: ಗೋವಾ ವಿಧಾನಸಭೆಯ ಎಲ್ಲಾ 40 ಸ್ಥಾನಗಳ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಬಹಿರಂಗವಾಗಲಿದೆ. ಸದ್ಯದ ಮಟ್ಟಿಗೆ ಇದೊಂದು ಜಿದ್ದಾಜಿದ್ದಿನ ಕಾಳಗದಂತೆ ಕಾಣುತ್ತಿದ್ದು, ಗೋವಾದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಮುನ್ನಡೆ ಸಾಧಿಸಿದ್ದಾರೆ.
ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಾಂಡ್ರೆಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲಕ್ಷ್ಮೀಕಾಂತ್ ಪರ್ಸೇಕರ್, ನಾನು ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ಇರುವುದಿಲ್ಲ. ಅವರು ನನಗೆ ಮೋಸ ಮಾಡಿದ್ದಾರೆ. ಹಾಗಾಗಿ, ಎರಡೂ ಪಕ್ಷಗಳಿಂದ ದೂರವಿದ್ದೇನೆ ಎಂದು ಹೇಳಿದ್ದಾರೆ.
GOA (40/40) | |||||
---|---|---|---|---|---|
BJP | INC+ | TMC+ | AAP | OTH | |
18 | 13 | 5 | 1 | 3 |
ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 16 ಸ್ಥಾನಗಳನ್ನು ಗೆಲ್ಲಬಹುದು ಎಂದು ವರದಿ ಮಾಡಲಾಗಿತ್ತು. 40 ಸದಸ್ಯ ಬಲದ ಗೋವಾ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.
ಇದನ್ನೂ ಓದಿ: Goa result: ಬಿಜೆಪಿಯ ದಿವ್ಯ ರಾಣೆ, ಕಾಂಗ್ರೆಸ್ನ ದಿಗಂಬರ್ ಕಾಮತ್ಗೆ ಗೆಲುವು