ETV Bharat / bharat

ಸಂವಿಧಾನದ 370ನೇ ವಿಧಿ ರದ್ದತಿ ವಿರುದ್ಧ ವಾದ ಮಂಡಿಸಿದ ಉಪನ್ಯಾಸಕ ಅಮಾನತು

Lecturer suspended: ಶ್ರೀನಗರದ ಸರ್ಕಾರಿ ಶಾಲೆಯ ಹಿರಿಯ ಉಪನ್ಯಾಸಕರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ.

Representative image
ಪ್ರಾತಿನಿಧಿಕ ಚಿತ್ರ
author img

By ETV Bharat Karnataka Team

Published : Aug 26, 2023, 2:30 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವುದರ ವಿರುದ್ಧ ವಾದ ಮಂಡಿಸಿದ ಸರ್ಕಾರಿ ಉಪನ್ಯಾಸಕರನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಅಮಾನತುಗೊಳಿಸಿದೆ. ಶ್ರೀನಗರದ ಜವಾಹರ್ ನಗರದಲ್ಲಿರುವ ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್​ನಲ್ಲಿ ರಾಜ್ಯಶಾಸ್ತ್ರದ ಹಿರಿಯ ಉಪನ್ಯಾಸಕ ಜಹೂರ್ ಅಹ್ಮದ್ ಭಟ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಸರ್ವೋಚ್ಚ ನ್ಯಾಯಾಲಯಕ್ಕೆ ಹಾಜರಾಗಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ. ಅಲ್ಲಿ ಅವರು ಸೇವಾ ನಿಯಮಗಳನ್ನು ಉಲ್ಲಂಘಿಸಿ ಆರ್ಟಿಕಲ್ 370 ಮತ್ತು ಆರ್ಟಿಕಲ್ 35ಎ ರದ್ದತಿ ವಿರುದ್ಧ ವಾದಿಸಿದರು. ಸರ್ಕಾರದ ನಿಬಂಧನೆಗಳ ಉಲ್ಲಂಘನೆಗಾಗಿ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಸರ್ಕಾರ ಇಂದು ಹೊರಡಿಸಿದ ಅಧಿಕೃತ ಹೇಳಿಕೆಯಲ್ಲಿ 'ಭಟ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಘೋಷಿಸಿದೆ.

ಆದರೆ ಅವರ ನಡವಳಿಕೆಯ ಬಗ್ಗೆ ತನಿಖೆ ಬಾಕಿಯಿದೆ'. ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವೆಗಳ ನಿಯಮಾವಳಿಗಳು (CSR), 1971ರ ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ (ನಡತೆ) ನಿಯಮಗಳು ಮತ್ತು ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳು ಅಮಾನತಿಗೆ ಆಧಾರವಾಗಿವೆ ಎಂದು ಹೇಳಿದೆ.

ಕಾನೂನಿನಲ್ಲಿ ಪದವಿ ಪಡೆದಿರುವ ಭಟ್​ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ಆ.5, 2019 ರಂದು ರದ್ದಾಗಿದ್ದ 370ನೇ ವಿಧಿ ವಿರುದ್ಧ ವಾದ ಮಂಡಿಸಿದ್ದರು. ಭಟ್ ಅವರನ್ನು ಅಮಾನತುಗೊಳಿಸಿದ ಅವಧಿಯಲ್ಲಿ ಜಮ್ಮುವಿನಲ್ಲಿರುವ ಶಾಲಾ ಶಿಕ್ಷಣ ನಿರ್ದೇಶಕರ ಕಚೇರಿಗೆ ವರದಿ ಮಾಡಲು ಆದೇಶದಲ್ಲಿ ನಿರ್ದೇಶಿಸಲಾಗಿದೆ. ಈ ಕ್ರಮವು ಜವಾಹರ್ ನಗರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ತನ್ನ ನಿಯಮಿತ ಕರ್ತವ್ಯಗಳಿಂದ ಬೇರ್ಪಟ್ಟಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಜಮ್ಮುವಿನ ಶಾಲಾ ಶಿಕ್ಷಣದ ಜಂಟಿ ನಿರ್ದೇಶಕ ಸುಬಹ್ ಮೆಹ್ತಾ ಅವರನ್ನು ನಿಯೋಜಿತ ವಿಚಾರಣಾ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ. ಕರ್ತವ್ಯಲೋಪ ಎಸಗಿದ ಉಪನ್ಯಾಸಕರ ವರ್ತನೆಯ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಸರ್ಕಾರ ಆದೇಶಿಸಿದೆ.

ಆರ್ಟಿಕಲ್ 370ರ ಅಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಒದಗಿಸಲಾಗಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿದಾರರ ಪರ ಹಾಜರಾದ ವಕೀಲರ ಪರವಾಗಿ ಭಟ್ ಅವರು ಬುಧವಾರ ವಾದ ಮಂಡಿಸಿದ್ದರು. ಈ ವಿಷಯದ ಬಗ್ಗೆ ಮಾತನಾಡಲು ಭಟ್ ಅವರಿಗೆ 10 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಭಟ್​ ರಾಜಕೀಯ ವಿಜ್ಞಾನದಲ್ಲಿ ಪದವಿಯ ಜೊತೆಗೆ, ಕಾನೂನು ಪದವೀಧರರೂ ಆಗಿದ್ದಾರೆ.

370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರ್ಟಿಕಲ್ 370 ಹಿಂದಿನ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು. ಆದರೆ 19 ಆಗಸ್ಟ್ 2019 ರಂದು, ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಅದನ್ನು ಕೇಂದ್ರ ಆಡಳಿತದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂದು ವಿಂಗಡಿಸಿತು. ಇದೇ ಪ್ರಕರಣದಲ್ಲಿ ಆಗಸ್ಟ್ 2ರಿಂದ ಪ್ರತಿದಿನವೂ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: 370ನೇ ವಿಧಿ ರದ್ದು ಮಾಡಲು ಸಾಧ್ಯವೇ ಇಲ್ಲ ಎಂದು ಹೇಳುವುದು ಕಷ್ಟ: ಸುಪ್ರೀಂ ಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.