ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಗರದ ನಬಣ್ಣಾದಲ್ಲಿ ಗುರುವಾರ ನಡೆದ ಮೆರವಣಿಗೆ ಕಾರ್ಯಕ್ರಮದಲ್ಲಿ ಎಡಪಂಥೀಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಲೆಫ್ಟ್ ಫ್ರಂಟ್ ಆರೋಪಿಸಿದ್ದು, ಇಂದು ರಾಜ್ಯಾದ್ಯಂತ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ.
ಕೋಲ್ಕತ್ತಾದ ನಬಣ್ಣಾದಲ್ಲಿ ಗುರುವಾರ ನಡೆದ ಮೆರವಣಿಗೆಯಲ್ಲಿ ಎಡಪಂಥೀಯ ಕಾರ್ಯಕರ್ತರನ್ನು ಥಳಿಸಲಾಯಿತು ಹಾಗೂ ಅವರ ಮೇಲೆ ನೀರಿನ ಫಿರಂಗಿಗಳನ್ನು ಹಾರಿಸುವ ಮೂಲಕ ಪೊಲೀಸರು ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 12 ಗಂಟೆಗಳ ಕಾಲ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಎಡಪಂಥೀಯ ಅಧ್ಯಕ್ಷ ಬಿಮನ್ ಬೋಸ್ ತಿಳಿಸಿದ್ದಾರೆ.
ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಶುಕ್ರವಾರ ರಾಜ್ಯ ಸರ್ಕಾರದ ಎಲ್ಲಾ ಉದ್ಯೋಗಿಗಳು ತಮ್ಮ ಕಚೇರಿಗೆ ಹಾಜರಾಗಬೇಕೆಂದು ಆದೇಶಿಸಿದೆ. ಇಂದು ಎಲ್ಲಾ ಸರ್ಕಾರಿ ಕಚೇರಿಗಳು ತೆರೆದಿರುತ್ತವೆ ಹಾಗೂ ಎಲ್ಲಾ ನೌಕರರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಇದೇ ವೇಳೆ ಸರ್ಕಾರ ಸ್ಪಷ್ಟನೆ ನೀಡಿದೆ.