ಲಖನೌ (ಉತ್ತರ ಪ್ರದೇಶ): ''ಉತ್ತರ ಪ್ರದೇಶದಲ್ಲಿ ವಾಹನಗಳ ಮೇಲೆ ಜಾತಿಯ ಹೆಸರುಗಳನ್ನು ಬರೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಇಡೀ ರಾಜ್ಯದಲ್ಲಿ ಕಟ್ಟುನಿಟ್ಟಿನ ತಪಾಸಣೆ ಅಭಿಯಾನ ನಡೆಸಲಾಗುವುದು. ಈ ವಿಷಯದಲ್ಲಿ ಪೊಲೀಸರ ಮೇಲೆ ಯಾರೂ ಶಿಫಾರಸು ಕೆಲಸ ಮಾಡುವುದಿಲ್ಲ, ಮಾಡಬಾರದು'' ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದರೊಂದಿಗೆ ಅಕ್ರಮವಾಗಿ ವಾಹನ ನಿಲ್ದಾಣ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಸರಗಳ್ಳತನ ಮತ್ತು ಸಣ್ಣಪುಟ್ಟ ಘಟನೆಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪ್ರಥಮ ಮಾಹಿತಿ ವರದಿಯನ್ನು ನೋಂದಾಯಿಸುವ ಮೊದಲು, ಪ್ರಾಥಮಿಕ ವಿಚಾರಣೆ ಮಾಡುವ ಮುನ್ನ ಮಾಹಿತಿ ನೀಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಥಮ ಮಾಹಿತಿ ವರದಿ ನೋಂದಾಯಿಸುವ ಮೊದಲು ಖಚಿತಪಡಿಸಿಕೊಳ್ಳಿ: ರಾಜ್ಯದಲ್ಲಿ ಸುಲಭ ವ್ಯಾಪಾರ, ವಹಿವಾಟು ಮಾಡಲು ಯಾವುದೇ ಅಡ್ಡಿಯಾಗಬಾರದು. ಯಾವುದೇ ಉದ್ಯಮಿ, ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕಟ್ಟಡ ನಿರ್ಮಾಣಕಾರರು, ಹೋಟೆಲ್ ರೆಸ್ಟೋರೆಂಟ್ ಇತ್ಯಾದಿಗಳಿಗೆ ಸಂಬಂಧಿಸಿದ ಮಾಲೀಕರು ಮತ್ತು ನಿರ್ವಹಣಾ ಹಂತದ ಉದ್ಯೋಗಿಗಳಿಗೆ ಯಾವುದೇ ರೀತಿಯಲ್ಲಿ ಕಿರುಕುಳ ನೀಡಬಾರದು. ಸುಲಭ ವ್ಯಾಪಾರ, ವಹಿವಾಟು ಮಾಡಲು ಅನುವು ಮಾಡಿಕೊಟಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
''ಪ್ರಥಮ ಮಾಹಿತಿ ವರದಿಯನ್ನು ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸಲು ಔಪಚಾರಿಕ ವಿಧಾನವನ್ನು ರೂಪಿಸಲಾಗಿದೆ. ವೈದ್ಯಕೀಯ, ಶಿಕ್ಷಣ, ಉತ್ಪಾದನೆ ಮುಂತಾದ ಎಲ್ಲಾ ಪ್ರಮುಖ ಸಂಸ್ಥೆಗಳು/ ಸಂಸ್ಥೆಗಳಲ್ಲಿ ಆಕಸ್ಮಿಕ ಅಪಘಾತಗಳಲ್ಲಿ ಪ್ರಥಮ ಮಾಹಿತಿ ವರದಿಯನ್ನು ನೋಂದಾಯಿಸುವ ಮೊದಲು ಖಚಿತಪಡಿಸಿಕೊಳ್ಳ ಬೇಕಾಗುತ್ತದೆ'' ಎಂದು ಸಿಎಂ ಹೇಳಿದ್ದಾರೆ.
ಸಿಎಂ ಕಟ್ಟುನಿಟ್ಟಿನ ಸೂಚನೆ ನಂತರ ಯುಪಿ ಪೊಲೀಸ್ ಅಲರ್ಟ್: ನಂಬರ್ ಪ್ಲೇಟ್‌ಗಳಲ್ಲಿ ಯಾವುದನ್ನು ಬರೆಯಬಾರದು ಎಂಬ ಪ್ರತಿಕ್ರಿಯಿಸಿದ ತಜ್ಞರು, ಮೋಟಾರು ವಾಹನ ಕಾಯ್ದೆ ಪ್ರಕಾರ ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿ ನಂಬರ್ ಹೊರತುಪಡಿಸಿ ಬೇರೆ ಏನನ್ನೂ ಬರೆಯಬಾರದು. ವಾಹನದ ನಂಬರ್ ಪ್ಲೇಟ್ ಹೇಗಿರಬೇಕು ಎಂದು ನಿಯಮಗಳಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಅದರ ಮೇಲೆ ನಿಗದಿಪಡಿಸಿದ್ದನ್ನು ಹೊರತುಪಡಿಸಿ ಏನನ್ನೂ ಬರೆಯಬಾರದು. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 177 ಇದಕ್ಕೆ ಶಿಕ್ಷೆಗೆ ಅವಕಾಶ ಕಲ್ಪಿಸಿದೆ. ಮೊದಲ ಬಾರಿ ಉಲ್ಲಂಘನೆಗೆ 500 ರೂಪಾಯಿ ದಂಡ ಹಾಕಲಾಗುತ್ತದೆ. ಎರಡನೇ ಬಾರಿಗೆ 1,500 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದರೆ, ಸಿಎಂ ಯೋಗಿ ಅವರ ಕಟ್ಟುನಿಟ್ಟಿನ ಸೂಚನೆ ಬಳಿಕ, ಪೊಲೀಸ್ ಅಧಿಕಾರಿಗಳು ಈ ನಿಯಮವನ್ನು ಮತ್ತಷ್ಟು ಬಿಗಿಗೊಳಿಸಬಹುದು.