ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೇಂದ್ರ ಸರ್ಕಾರದಿಂದ ಘೋಷಣೆಯಾಗಿರುವ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ತಿರಸ್ಕಾರ ಮಾಡಿರುವ ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
90 ವರ್ಷದ ಗಾಯಕಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಇದರ ಬೆನ್ನಲ್ಲೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಅವರು, ಇಂದು ಬೆಳಗ್ಗೆ ತೀವ್ರ ಅಸ್ವಸ್ಥರಾಗಿದ್ದರು. ಜೊತೆಗೆ ಉಸಿರಾಟದ ತೊಂದರೆ ಸಹ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ: ರಾಷ್ಟ್ರಪತಿಗಳಿಂದ ಗಣರಾಜ್ಯೋತ್ಸಕ್ಕೆ ಆಹ್ವಾನಿತನಾಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ!
ಇವರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಕ್ಷಣವೇ ಅವರ ಕುಟುಂಬದ ಸದಸ್ಯರನ್ನ ಸಂಪರ್ಕಿಸಿದ್ದಾರೆಂದು ವರದಿಯಾಗಿದೆ. ಗಾಯಕಿಗೆ ಇದೀಗ ಕೋಲ್ಕತ್ತಾದ ಎಸ್ಎಸ್ಕೆಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ್ದ ಇವರು, ನನಗಿಂತಲೂ ಕಿರಿಯರಿಗೆ ಈ ಗೌರವ ಸಲ್ಲಬೇಕು. ನನ್ನ ವಯಸ್ಸಿನವರಿಗೆ ಇದು ಸಲ್ಲುವಂಥದ್ದು ಅಲ್ಲ. 90ರ ವಯಸ್ಸಿನಲ್ಲಿ ಈ ಪ್ರಶಸ್ತಿ ನೀಡುತ್ತಿರುವುದು ನನಗೆ ಮಾಡುವ ಅವಮಾನ ಎಂದು ಹೇಳಿಕೆ ನೀಡಿ ಪ್ರಶಸ್ತಿ ತಿರಸ್ಕಾರ ಮಾಡಿದ್ದರು.
ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಕೂಡ ತಮಗೆ ಘೋಷಣೆಯಾಗಿರುವ ಪದ್ಮಭೂಷಣ ಪ್ರಶಸ್ತಿ ತಿರಸ್ಕಾರ ಮಾಡಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ