ETV Bharat / bharat

ಪಾಕ್​ ಗೆಲುವು ಸಂಭ್ರಮಿಸಿದ ಕಾಶ್ಮೀರಿಗಳ ವಿರುದ್ಧ ಕೋಪವೇಕೆ? ಮೆಹಬೂಬಾ ಟ್ವೀಟ್​ - ಪಾಕ್​ ಗೆದ್ದ ಸಂಭ್ರಮಾಚರಣೆ

ಸಾಂಪ್ರದಾಯಿಕ ಎದುರಾಳಿ ಪಾಕ್​ ವಿರುದ್ಧ ಭಾರತ ಸೋಲು ಕಾಣುತ್ತಿದ್ದಂತೆ ಕಾಶ್ಮೀರದ ಕೆಲವೊಂದು ಪ್ರದೇಶಗಳಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಇದರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ ಮೆಹಬೂಬಾ ಮುಫ್ತಿ ಅದರ ಪರವಾಗಿ ಬ್ಯಾಟ್​ ಬೀಸಿದ್ದಾರೆ.

Mehbooba
Mehbooba
author img

By

Published : Oct 26, 2021, 12:57 AM IST

Updated : Oct 26, 2021, 6:26 AM IST

ಶ್ರೀನಗರ: ಐಸಿಸಿ ಟಿ-20 ವಿಶ್ವಕಪ್​​ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್​ ವಿರುದ್ಧ ಭಾರತ ಸೋಲು ಕಾಣುತ್ತಿದ್ದಂತೆ ಕೋಟ್ಯಂತರ ಅಭಿಮಾನಿಗಳು ನಿರಾಸೆಗೊಳಗಾಗಿದ್ದಾರೆ. ಅದಾಗ್ಯೂ ಜಮ್ಮು-ಕಾಶ್ಮೀರದ ಕೆಲವೊಂದು ಪ್ರದೇಶಗಳಲ್ಲಿ ಪಾಕ್​ ಗೆಲುವಿನ ಸಂಭ್ರಮ ಮಾಡಲಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಇದೇ ವಿಚಾರವಾಗಿ ಮಾತನಾಡಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಪಾಕಿಸ್ತಾನದ ಗೆಲುವು ಸಂಭ್ರಮಿಸಿದ್ದಕ್ಕೆ ಜನರು ಏಕೆ ಉದ್ರೇಕಗೊಂಡಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಫ್ತಿ, ಭಾರತದ ವಿರುದ್ಧ ಗೆದ್ದ ಪಾಕ್​ ಗೆಲುವನ್ನ ಸಂಭ್ರಮಿಸುತ್ತಿರುವ ಕಾಶ್ಮೀರಿಗಳ ಮೇಲೆ ಇಷ್ಟೊಂದು ಕೋಪ ಏಕೆ? ಕೆಲವರು ಕೊಲೆಗಡುಕ ಘೋಷಣೆ ಕೂಗುತ್ತಿದ್ದಾರೆ. ದೇಶ ದ್ರೋಹಿಗಳಿಗೆ ಗುಂಡಿಕ್ಕಿ ಕೊಲೆ ಮಾಡಿ ಎಂಬ ಕರೆ ನೀಡುತ್ತಿದ್ದಾರೆ. ಆದರೆ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದುಕೊಳ್ಳುತ್ತಿದ್ದಂತೆ ಅನೇಕರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು ಎಂಬುದನ್ನ ಯಾರೂ ಮರೆತಿಲ್ಲ ಎಂದಿದ್ದಾರೆ.

  • Lets agree to disagree & take it in the right spirit like Virat Kohli who was the first to congratulate the Pakistani cricket team.

    — Mehbooba Mufti (@MehboobaMufti) October 25, 2021 " class="align-text-top noRightClick twitterSection" data=" ">

ಇದನ್ನೂ ಓದಿರಿ: ಕೋವಿಡ್‌ ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ: ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲು ಹೈಕೋರ್ಟ್ ಆದೇಶ

ಭಾರತ ಸೋಲು ಕಾಣುತ್ತಿದ್ದಂತೆ ಪಾಕಿಸ್ತಾನ ಕ್ರಿಕೆಟ್ ತಂಡವನ್ನ ಮೊದಲು ಅಭಿನಂದಿಸಿದ ವಿರಾಟ್​ ಕೊಹ್ಲಿಯಂತೆ ಒಪ್ಪಿಕೊಳ್ಳಲು ಕಲಿಯಿರಿ. ಸರಿಯಾದ ಮನೋಭಾವದಿಂದ ವರ್ತಿಸಿ ಎಂದು ಮತ್ತೊಂದು ಟ್ವೀಟ್​​ನಲ್ಲಿ ಹೇಳಿಕೊಂಡಿದ್ದಾರೆ.

ಐಸಿಸಿ ಟಿ-20 ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 10 ವಿಕೆಟ್​ಗಳ ಸೋಲು ಕಂಡಿದ್ದು, ಈ ಮೂಲಕ ಬರೋಬ್ಬರಿ 29 ವರ್ಷಗಳ ನಂತರ ವಿಶ್ವಕಪ್ ಟೂರ್ನಿಯಲ್ಲಿ ಪಾಕ್​ ವಿರುದ್ಧ ಸೋಲು ಕಂಡಿರುವ ಅಪಖ್ಯಾತಿಗೆ ಭಾರತ ಪಾತ್ರವಾಗಿದೆ.

Last Updated : Oct 26, 2021, 6:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.