ETV Bharat / bharat

ಭವ್ಯ ಮಂದಿರದಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ: ಪ್ರಧಾನಿ ಮೋದಿಗೆ ಪತ್ರ ಮುಖೇನ ಆಹ್ವಾನಿಸಿ, ಒಪ್ಪಿಗೆಗಾಗಿ ಕಾದ ಶ್ರೀರಾಮ ಟ್ರಸ್ಟ್

ಮುಂದಿನ ವರ್ಷದ ಜನವರಿಯಲ್ಲಿ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪತ್ರ ಬರೆದು ಆಹ್ವಾನಿಸಿದೆ.

ಭವ್ಯ ರಾಮಮಂದಿರದಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ

author img

By

Published : Jul 25, 2023, 9:09 PM IST

ಅಯೋಧ್ಯೆ : ವಿಶ್ವವೇ ಬೆರಗುಗಣ್ಣಿನಿಂದ ನೋಡುವಂತೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ದೇಗುಲ 2024 ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಂದಿನ ವರ್ಷದ ಜನವರಿ 15 ರಿಂದ 24 ರ ನಡುವೆ ರಾಮನ (ರಾಮಲಲ್ಲಾ) ವಿಗ್ರಹ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

ಧಾರ್ಮಿಕ ನಗರಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ನೂತನ ದೇಗುಲದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾನಾ ಕಾರ್ಯಕ್ರಮವನ್ನು ಮುಂದಿನ ವರ್ಷದ ಜನವರಿಯಲ್ಲಿ ನಡೆಸಲು ರಾಮಮಂದಿರ ಟ್ರಸ್ಟ್​ ಉದ್ದೇಶಿಸಿದೆ. ಇದಕ್ಕಾಗಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಮುಂದಿನ ವರ್ಷದ ಆರಂಭದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ಕಳುಹಿಸಲಾಗಿದೆ. ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 10 ಸಾವಿರ ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಮನ ವಿಗ್ರಹ ಪ್ರತಿಷ್ಠಾಪನೆಗಾಗಿ ದೇಶದ ಪ್ರತಿ ಗ್ರಾಮದ ದೇವಸ್ಥಾನವನ್ನು ಸಂಪರ್ಕಿಸುವ ಯೋಜನೆ ಇದೆ. ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ. ದೇಶದ ಎಲ್ಲ ಮೂಲೆಯಿಂದಲೂ ಭಕ್ತರು ಆಗಮಿಸಲಿದ್ದು, ವ್ಯಾಪಕ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

10 ದಿನ ಶ್ರೀರಾಮೋತ್ಸವ : ಜನವರಿ 15 ರಿಂದ ಜನವರಿ 24 ರ ವರೆಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನಿಗಳು ಭಾಗವಹಿಸಿದರೆ ಇಡೀ ವಿಶ್ವದಲ್ಲಿ ಅಯೋಧ್ಯೆಯ ಘನತೆ ಹೆಚ್ಚಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ರಾಮ ಭಕ್ತರು ಅಯೋಧ್ಯೆಗೆ ಆಗಮಿಸಲಿದ್ದು, 10,000 ಕುರ್ಚಿಗಳನ್ನು ಅಳವಡಿಸಲಾಗುವುದು ಎಂದು ಚಂಪತ್ ರೈ ತಿಳಿಸಿದ್ದಾರೆ.

ಸದ್ಯ ನಡೆಯುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯಲ್ಲಿ ದೇಗುಲದ ಕೆಳ ಮಹಡಿಯ ನೆಲಹಾಸು ಕೆಲಸ ಮುಗಿಯುತ್ತಿದ್ದು, ಇದಕ್ಕಾಗಿ ರಾಜಸ್ಥಾನದ ಬಿಳಿ ಮಾರ್ಕಾನಾ ಮಾರ್ಬಲ್ ಅನ್ನು ಬಳಸಲಾಗಿದೆ. ಈ ವರ್ಷಾಂತ್ಯಕ್ಕೆ ರಾಮಮಂದಿರದ ಕಾಮಗಾರಿ ಸಂಪೂರ್ಣವಾಗಿ ಮುಗಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಹಂಚಿಕೊಂಡಿದ್ದ ಟ್ರಸ್ಟ್: ಭರದಿಂದ ಸಾಗುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋಗಳನ್ನು ಟ್ರಸ್ಟ್​​ ಹಂಚಿಕೊಂಡಿದ್ದು, ರಾಮಮಂದಿರದ ಗರ್ಭಗುಡಿಯ ಸುತ್ತಲಿನ ಸುಂದರ ಕೆತ್ತನೆಗಳನ್ನು ತೋರಿಸಲಾಗಿದೆ. ಇಲ್ಲಿನ ಶಿಲ್ಪಕಲೆಗಳು, ಕೆತ್ತನೆಗಳು ಅದ್ಭುತವಾಗಿ ಮೂಡಿಬಂದಿದ್ದು, ನೋಡುಗರನ್ನು ಬೇರೆ ಲೋಕಕ್ಕೆ ಕರೆದೊಯ್ಯುವಂಗಿದೆ. ರಾಮಮಂದಿರದ ಕೆಲ ಅಂತಸ್ತಿನ ನಿರ್ಮಾಣ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದ್ದು, ಉಳಿದ ಕಾರ್ಯಗಳು ಭರದಿಂದ ಸಾಗುತ್ತಿವೆ.

ಇದನ್ನೂ ಓದಿ: 2024ಕ್ಕೆ ಅಯೋಧ್ಯೆದಲ್ಲಿ ರಾಮಮಂದಿರ ನಿರ್ಮಾಣ ಪೂರ್ಣ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.