ETV Bharat / bharat

ಮೀರತ್‌ನ ಮಿಲಿಟರಿ ವಸತಿ ಪ್ರದೇಶದಲ್ಲಿ ಬಾಂಬ್​ ಬೆದರಿಕೆ ಪತ್ರ ಪತ್ತೆ

ಮಿಲಿಟರಿ ವಸತಿ ಪ್ರದೇಶದಲ್ಲಿ ಪತ್ರವೊಂದು ಕಂಡುಬಂದಿದೆ, ಅದರಲ್ಲಿ ಅವರು ಕೆಲವು ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಉಲ್ಲೇಖಿಸಿದ್ದಾರೆ ಎಂದು ಮೀರತ್ ಎಸ್ಪಿ ವಿನೀತ್ ಭಟ್ನಾಗರ್ ಹೇಳಿದ್ದಾರೆ. ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ಪ್ರಸ್ತಾಪಿಸಲಾದ ಮೊಬೈಲ್ ಸಂಖ್ಯೆಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ.

residential area found at Meerut
ಎಸ್​ಪಿ ಮಾಹಿತಿ
author img

By

Published : Apr 21, 2021, 6:50 PM IST

ಮೀರತ್​/ಉತ್ತರಪ್ರದೇಶ: ಬಾಂಬ್ ಸ್ಫೋಟ ಸಂಭವಿಸುವ ಬಗ್ಗೆ ಮಾಹಿತಿ ಹೊಂದಿರುವ 'ಬೆದರಿಕೆ ಪತ್ರ'ವೊಂದು ಮೀರತ್‌ನ ಮಿಲಿಟರಿ ವಸತಿ ಪ್ರದೇಶದಲ್ಲಿ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೀರತ್ ಎಸ್​ಪಿ ವಿನೀತ್ ಭಟ್ನಾಗರ್

ವರದಿಗಳ ಪ್ರಕಾರ, ಮಿಲಿಟರಿ ವಸತಿ ಪ್ರದೇಶದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರ ದೊರೆತ ತಕ್ಷಣವೇ ಸ್ಥಳದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಈ ಬಗ್ಗೆ ಈಟಿವಿ ಭಾರತಕ್ಕೆ ಮಾಹಿತಿ ನೀಡಿರುವ ಮೀರತ್ ಎಸ್​ಪಿ ವಿನೀತ್ ಭಟ್ನಾಗರ್ , ಕೆಲವು ಅಪರಿಚಿತ ದುಷ್ಕರ್ಮಿಗಳು ಈ ಪತ್ರವನ್ನು ಬರೆದಿದ್ದಾರೆ, ಅದರಲ್ಲಿ ಕೆಲವು ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಉಲ್ಲೇಖಿಸಿದ್ದಾರೆ. ಆ ಮೊಬೈಲ್​ ಸಂಖ್ಯೆಗಳು ಹರಿಯಾಣದ ಕರ್ನಲ್​ ಜಿಲ್ಲಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿವೆ ಎಂದು ಎಸ್​ಪಿ ತಿಳಿಸಿದ್ದಾರೆ. ಸೈಬರ್ ಕ್ರೈಂ ಸೆಂಟರ್​ಗೆ ಸಂಖ್ಯೆಗಳನ್ನು ಕಳುಹಿಸಲಾಗಿದ್ದು, ಮುನ್ನೆಚ್ಚರಿಕೆ ಭಾಗವಾಗಿ ಈ ಪ್ರದೇಶದಲ್ಲಿ ವಿಶೇಷ ಕಾರ್ಯಪಡೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.