ETV Bharat / bharat

ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ದಾರುಣ ಸಾವು, ಭೂಕುಸಿತಕ್ಕೆ ವ್ಯಕ್ತಿ ಬಲಿ - ಒಡಿಶಾ ಮಳೆ ಅನಾಹುತ

ಮಾನ್ಸೂನ್​ ಮಳೆಯಾರ್ಭಟ ಜೋರಾಗಿದ್ದು, ಒಡಿಶಾದಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಚಲಿಸುತ್ತಿದ್ದ ಟ್ರಕ್​ ಮೇಲೆ ಮಣ್ಣು ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಒಡಿಶಾದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ದಾರುಣ ಸಾವು

author img

By

Published : Jun 19, 2022, 9:17 PM IST

ಒಡಿಶಾ/ಜಮ್ಮು-ಕಾಶ್ಮೀರ: ದೇಶದ ಹಲವೆಡೆ ಮಳೆಯಾರ್ಭಟ ಜೋರಾಗಿದೆ. ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇಂದು ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು, ಇಬ್ಬರು ಗಾಯಗೊಂಡರೆ, ಜಮ್ಮು ಕಾಶ್ಮೀರದಲ್ಲಿ ಭೂಕುಸಿತದಲ್ಲಿ ಸಿಲುಕಿ ಓರ್ವ ಮೃತಪಟ್ಟಿದ್ದಾನೆ.

ಒಡಿಶಾದ ಗ್ರಾಮವೊಂದರಲ್ಲಿ ನಿರ್ಮಾಣ ಮಾಡಲಾಗುತ್ತಿದ್ದ ಮನೆಗೆ ಸಿಡಿಲು ಬಡಿದಿದೆ. ಇದರಿಂದ ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕೋಮ್ನಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಭೂಕುಸಿತ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿದೆ. ಘಟನೆಯಲ್ಲಿ 45 ವರ್ಷದ ಟ್ರಕ್ ಚಾಲಕ ಸಾವನ್ನಪ್ಪಿದ್ದು, ಹಲವಾರು ಅಂಗಡಿಗಳು ಹಾನಿಗೊಳಗಾಗಿವೆ.

ಭಾರಿ ಮಳೆಯಿಂದಾಗಿ ಮಂಡಿ-ಪೂಂಚ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಟ್ರಕ್​ ಮೇಲೆ ಮಣ್ಣು ಕುಸಿದಿದೆ. ಟ್ರಕ್​ನೊಳಗೆ ಚಾಲಕ ಸಿಲುಕಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಜನರು ಮಣ್ಣನ್ನು ಜೆಸಿಬಿ ಸಹಾಯದಿಂದ ತೆರವು ಮಾಡಲಾಯಿತು.

ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಟ್ರಕ್​ ಚಾಲಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಮಣ್ಣು ರಸ್ತೆಯ ಬದಿಯಲ್ಲಿದ್ದ ಅಂಗಡಿಗಳ ಮೇಲೂ ಬಿದ್ದಿದ್ದು, ಐದು ಗೂಡಂಗಡಿಗಳು ಹಾಳಾಗಿವೆ.

ಓದಿ: ಅಗ್ನಿಪಥ್​ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ಎಂದ ಸಿಎಂ ಸ್ಟಾಲಿನ್​; ಕ್ರಾಂತಿಕಾರಿ ನೀತಿ ಎಂದ ಗವರ್ನರ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.