ನಾಮಕ್ಕಲ್(ತಮಿಳುನಾಡು): ಮದ್ಯಪ್ರಿಯರಿಗೆ ಇಲ್ಲಿನ ಜಿಲ್ಲಾಡಳಿತ ಶಾಕ್ ನೀಡಿದೆ. ಎರಡು ಡೋಸ್ ಲಸಿಕೆ ಪಡೆದವರು ಮಾತ್ರ ಇನ್ಮುಂದೆ ಮದ್ಯ ಖರೀದಿಸಬಹುದು ಎಂಬ ಆದೇಶ ಹೊರಡಿಸಿದೆ.
ನಾಮಕ್ಕಲ್ನಲ್ಲಿರುವ ಎಲ್ಲಾ ಮದ್ಯದಂಗಡಿಗಳ ಮುಂದೆ ‘ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಮದ್ಯ ಖರೀದಿಸಲು ಅವಕಾಶ’ ಎಂಬ ಬೋರ್ಡ್ ಅಳವಡಿಸಲಾಗಿದೆ. ಮದ್ಯ ಖರೀದಿಸಲು ಬಂದವರು, ಬೋರ್ಡ್ ನೋಡಿ ಗಾಬರಿಯಾಗಿದ್ದಾರೆ. ಅಲ್ಲದೆ, ಮದ್ಯ ಖರೀದಿ ಮಾಡುವವರು ವ್ಯಾಕ್ಸಿನ್ ಹಾಕಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಇದನ್ನೂ ಓದಿ: ಕಳೆದ ವರ್ಷದ ಮಾರ್ಚ್ನಿಂದ ಇದೇ ಮೊದಲ ಬಾರಿಗೆ ದೇಶದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಳ
ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್ ದೃಷ್ಟಿಯಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.