ಮೊರಾದಾಬಾದ್ (ಉತ್ತರ ಪ್ರದೇಶ): ಮೊರಾದಾಬಾದ್‌ನಲ್ಲಿ ಸ್ಥಳೀಯರು ಸಬ್ ಇನ್ಸ್‌ಪೆಕ್ಟರ್ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆಯ ಚಿತ್ರಣ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದರ್ ಮಾತನಾಡಿ, "ನಾನು ತಡರಾತ್ರಿ 1:30 ರ ಸುಮಾರಿಗೆ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದೆ. ಈ ಸಮಯದಲ್ಲಿ 30 ರಿಂದ 40 ಜನ ಅಪರಿಚಿತರು ಬಂದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ತಲೆ, ಕೈ ಮತ್ತು ಕಣ್ಣಿಗೆ ಕೋಲುಗಳಿಂದ ಹಲ್ಲೆ ಮಾಡಿದ್ದಾರೆ" ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬೈಕ್ ವೀಲ್ಹಿಂಗ್: ಯುವಕರಿಬ್ಬರ ಮೇಲೆ ಪ್ರಕರಣ ದಾಖಲು, ಬೈಕ್ಗಳು ವಶಕ್ಕೆ
ಈ ಸಂಬಂಧ 4 ಜನರನ್ನು ಬಂಧಿಸಲಾಗಿದ್ದು, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.