ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಪ್ರತಿದಿನ ಸಾವಿರಾರು ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದು ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇದೇ ವಿಷಯವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ರಾಜ್ಯದ ಜನರನ್ನುದ್ದೇಶಿಸಿ ಮಹತ್ವದ ಭಾಷಣ ಮಾಡಿದ್ದು, ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ರಾಜ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ಲಾಕ್ಡೌನ್ ಹೇರಿಕೆ ತಳ್ಳಿಹಾಕುವಂತಿಲ್ಲ ಎಂದು ಎಚ್ಚರಿಕೆ ನೀಡಿರುವ ಠಾಕ್ರೆ, ಒಂದೆರಡು ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು.
-
I cannot rule out imposing a lockdown if the current COVID19 situation prevails. People have become complacent: Maharashtra CM Uddhav Thackeray pic.twitter.com/1pPr9ahDwm
— ANI (@ANI) April 2, 2021 " class="align-text-top noRightClick twitterSection" data="
">I cannot rule out imposing a lockdown if the current COVID19 situation prevails. People have become complacent: Maharashtra CM Uddhav Thackeray pic.twitter.com/1pPr9ahDwm
— ANI (@ANI) April 2, 2021I cannot rule out imposing a lockdown if the current COVID19 situation prevails. People have become complacent: Maharashtra CM Uddhav Thackeray pic.twitter.com/1pPr9ahDwm
— ANI (@ANI) April 2, 2021
ರಾಜ್ಯದಲ್ಲಿ ಇಲ್ಲಿಯವರೆಗೆ 65 ಲಕ್ಷ ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಇಂದು ಕೂಡ 3 ಲಕ್ಷ ಜನರಿಗೆ ಲಸಿಕೆ ವಿತರಣೆಯಾಗಿದೆ. ಲಸಿಕೆ ನೀಡಿದ ಬಳಿಕ ಕೂಡ ಕೆಲವರು ಸೋಂಕಿಗೊಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಮಾಸ್ಕ್ ಹಾಕಿಕೊಳ್ಳದೇ ಇರುವುದು ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರತಿದಿನ 2.5 ಲಕ್ಷ ಆರ್ಟಿ-ಪಿಸಿಆರ್ ಟೆಸ್ಟ್ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಗಳ ಸಂಖ್ಯೆ ಇದೇ ರೀತಿ ಹೆಚ್ಚಾಗುತ್ತಿದ್ದಂತೆ ಮುಂದಿನ 15-20 ದಿನಗಳಲ್ಲಿ ಆರೋಗ್ಯ ಮೂಲ ಸೌಕರ್ಯಗಳ ಕೊರತೆ ಉಂಟಾಗಬಹುದು ಎಂದು ಠಾಕ್ರೆ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: Covid World Update: ಅಮೆರಿಕ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ!
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಮುಂದುವರೆದರೆ ಆರ್ಥಿಕತೆ ಅಥವಾ ಆರೋಗ್ಯ ನೋಡಬೇಕೇ ಎಂಬ ಪ್ರಶ್ನೆ ಉದ್ಭವವಾಗಲಿದ್ದು,ಲಾಕ್ಡೌನ್ ಬಗ್ಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಹೇಳಿದರು.
ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಈಗಾಗಲೇ ಪುಣೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ಗಂಟೆಯವರೆಗೆ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಲಾಗಿದೆ. ಅಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಲಾಗಿದೆ.