ETV Bharat / bharat

ಮಣಿಪುರ ಹಿಂಸಾಚಾರ ಖಂಡಿಸಿ ಸಂಸತ್​ನಲ್ಲಿ ಗದ್ದಲ.. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಒಕ್ಕೂಟ ನಿರ್ಧಾರ - amid din over Manipur

ವಿಪಕ್ಷಗಳು ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿಯವರು ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದವು. ಈ ಸಂಬಂಧ ಉಭಯ ಸದನಗಳು ಮುಂದೂಡಲ್ಪಟ್ಟಿವೆ. ಈ ನಡುವೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಒಕ್ಕೂಟ ಮುಂದಾಗಿದೆ.

lok-sabha-rajya-sabha-adjourned-amid-din-over-manipur-congress-asks-what-scares-pm-from-making-statement-in-parliament
ಮಣಿಪುರ ಹಿಂಸಾಚಾರ ಗದ್ದಲ : ಉಭಯ ಸದನಗಳ ಕಲಾಪ ಮುಂದೂಡಿಕೆ
author img

By

Published : Jul 25, 2023, 12:30 PM IST

Updated : Jul 25, 2023, 1:14 PM IST

ನವದೆಹಲಿ : ಉಭಯ ಸದನಗಳ ಮುಂಗಾರು ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಮಣಿಪುರ ಹಿಂಸಾಚಾರ ಗದ್ದಲ ಮುಂದುವರೆದಿದೆ. ಈ ಸಂಬಂಧ ಉಭಯ ಸದನಗಳ ಕಲಾಪ ಮುಂದೂಡಲ್ಪಟ್ಟಿದೆ. ಮೂರನೇ ದಿನದ ಕಲಾಪ ವಿಪಕ್ಷಗಳ ಗದ್ದಲಗಳಿಂದ ಕಳೆದ ನಂತರ ನಾಲ್ಕನೇ ದಿನವೂ ವಿಪಕ್ಷಗಳು ಉಭಯ ಸದನಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಗದ್ದಲ ಮುಂದುವರೆಸಿದೆ.

ಈ ವೇಳೆ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರು ಈ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಹೇಳಿಕೆ ನೀಡಲು ​ಪ್ರಧಾನಿ ನರೇಂದ್ರ ಮೋದಿ ಯಾಕೆ ಹೆದರಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕೆಲವು ಸತ್ಯಾಂಶಗಳನ್ನು ಬಹಿರಂಗಪಡಿಸುವುದರಿಂದ ವಿಪಕ್ಷಗಳು ಓಡಿ ಹೋಗುತ್ತಿವೆ ಎಂದಿದೆ.

ಈ ಮಧ್ಯೆ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಕಾಶ ಕಲ್ಪಿಸುವುದಾಗಿ ಹೇಳಿದರೂ ವಿಪಕ್ಷಗಳ ನಾಯಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಈ ವೇಳೆ ಉಭಯ ಸದನಗಳ ಅಧ್ಯಕ್ಷರು ಕಲಾಪವನ್ನು ಮುಂದೂಡಿದರು.

ಆಪ್ ಸಂಸದ ಸಂಜಯ್​ ಸಿಂಗ್​ ಪ್ರತಿಭಟನೆ : ರಾಜ್ಯಸಭೆಯಲ್ಲಿ ನಿನ್ನೆ ನಡೆದ ಕಲಾಪದ ಸಂದರ್ಭದಲ್ಲಿ ಆಪ್​ ಸಂಸದ ಸಂಜಯ್​ ಸಿಂಗ್​ ಅವರನ್ನು ರಾಜ್ಯಸಭೆ ಅಧ್ಯಕ್ಷರು ಅಮಾನತುಗೊಳಿಸಿದ್ದರು. ರಾಜ್ಯಸಭೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ಕಲಾಪ ಮುಗಿಯುವವರಿಗೆ ಅಮಾನತು ಮಾಡಲಾಗಿದೆ. ಈ ಸಂಬಂಧ ವಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಮಾನತನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಅವರು ರಾಜ್ಯಸಭೆಗೆ ಆಗಮಿಸಿದ್ದರು. ಕಲಾಪ ಮುಂದೂಡಿದ ಬಳಿಕ ಅಲ್ಲಿಂದ ಹೊರ ನಡೆದರು.

ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧಾರ : ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಭೆ ನಡೆಸಿದವು. ಈ ಸಂಬಂಧ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಲಾಯಿತು.

ಈ ಬಗ್ಗೆ ಟ್ವೀಟ್​ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 83 ದಿನಗಳಿಂದ ಮಣಿಪುರದಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದೆ. ಈ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕಾಗಿದೆ. ಮಣಿಪುರ ಹಿಂಸಾಚಾರದ ಬಗ್ಗೆ INDIA ಮೋದಿ ಸರ್ಕಾರದಿಂದ ಉತ್ತರವನ್ನು ಕೇಳಬಯಸುತ್ತದೆ ಎಂದು ಹೇಳಿದ್ದಾರೆ.

ದೇಶದ ಈಶಾನ್ಯದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಮಣಿಪುರ ಹಿಂಸಾಚಾರದ ಪರಿಣಾಮಗಳು ಇತರ ರಾಜ್ಯಗಳಿಗೂ ಹರಡುತ್ತಿವೆ. ಇದು ಗಡಿ ರಾಜ್ಯಗಳಿಗೆ ಒಳ್ಳೆಯದಲ್ಲ. ಆದ್ದರಿಂದ ಪ್ರಧಾನಿ ಮೋದಿಯವರು ತಮ್ಮ ಅಹಂಕಾರವನ್ನು ಬಿಟ್ಟು ಮಣಿಪುರದ ವಿಚಾರದ ಮೇಲೆ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ತಮ್ಮ ಸರ್ಕಾರ ಏನು ಮಾಡುತ್ತಿದೆ ಮತ್ತು ಮಣಿಪುರದಲ್ಲಿ ಯಾವಾಗ ಸಹಜ ಸ್ಥಿತಿ ಮರಳುತ್ತದೆ ಎಂಬುದನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 26 ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿವೆ. ಇದು ಉಭಯ ಸದನಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದೆ. ಜುಲೈ 20 ರಂದು ಪ್ರಾರಂಭವಾದ ಮುಂಗಾರು ಅಧಿವೇಶನವು ಆಗಸ್ಟ್ 11 ರವರೆಗೆ ನಡೆಯಲಿದೆ. ವಿರೋಧ ಪಕ್ಷಗಳ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಹಿಂಪಡೆಯಲು ವಿಪಕ್ಷ ನಾಯಕರು ನಿರಾಕರಿಸಿದ್ದಾರೆ.

ಇದನ್ನೂ ಓದಿ : Menstrual Hygiene Policy: ಋತುಚಕ್ರ ನೈರ್ಮಲ್ಯ ನೀತಿ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್‌ ಎಚ್ಚರಿಕೆ

Last Updated : Jul 25, 2023, 1:14 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.