ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿಯಾಗಿದ್ದ ಧರ್ಮೇಗೌಡರ ಸಾವಿನ ಬಗ್ಗೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ಧರ್ಮೇಗೌಡರ ನಿಧನದ ಸುದ್ದಿಯಿಂದ ಬೇಸರಗೊಂಡಿದ್ದೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಓದಿ:ರಾಮ ಮಂದಿರದ ಬುನಾದಿಗೆ ಉತ್ತಮ ಮಾದರಿ ತಿಳಿಸಲು ಐಐಟಿಗೆ ಮನವಿ
ವಿಧಾನ ಪರಿಷತ್ ಸದನದಲ್ಲಿ ನಡೆದ ದುರದೃಷ್ಟಕರ ಘಟನೆ ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿಯಾಗಿದೆ. ಸಾಂವಿಧಾನಿಕ ಸಂಸ್ಥೆಗಳ ಪ್ರತಿಷ್ಠೆ ಮತ್ತು ಅಧ್ಯಕ್ಷರ ಅಧಿಕಾರಗಳ ಘನತೆ ಮತ್ತು ಸ್ವಾತಂತ್ರ್ಯವನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಬಿರ್ಲಾ ಅಭಿಪ್ರಾಯಪಟ್ಟಿದ್ದಾರೆ.