ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್), ಮಾರ್ಚ್ 19ರಂದು ಓಂ ಬಿರ್ಲಾರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಮಾ.20ರಂದು ಏಮ್ಸ್ನ ಕೋವಿಡ್ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಕೋಟಾದಲ್ಲಿ ಕೊರೊನಾ ಲಸಿಕೆ ಪಡೆದ 106 ವರ್ಷದ ವೃದ್ಧೆ
ಬಿರ್ಲಾರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ ಎಂದು ಏಮ್ಸ್ ಮಾಹಿತಿ ನೀಡಿದೆ.